20 ಡ್ರಗ್ಸ್ ಪೆಡ್ಲರ್‍ಗಳ ವಿಚಾರಣೆ

ಈ ಸುದ್ದಿಯನ್ನು ಶೇರ್ ಮಾಡಿ

ಬೆಂಗಳೂರು,ಸೆ.3- ಇದುವರೆಗೆ 20 ಡ್ರಗ್ ಪೆಡ್ಲರ್‍ಗಳನ್ನು ವಶಕ್ಕೆ ಪಡೆಯಲಾಗಿದೆ ಎಂದು ಸಿಸಿಬಿ ಮುಖ್ಯಸ್ಥ ಸಂದೀಪ್ ಪಾಟೀಲ್ ತಿಳಿಸಿದ್ದಾರೆ.  ವಾಹನಗಳಲ್ಲಿ ಸಾಗಿಸುತ್ತಿದ್ದ ಡ್ರಗ್ಸ್ ವಶಪಡಿಸಿಕೊಳ್ಳಲಾಗಿದ್ದು, ಡ್ರಗ್ಸ್ ಪೆಡ್ಲರ್‍ಗಳನ್ನು ವಿಚಾರಣೆಗೊಳಪಡಿಸಿ ಹೆಚ್ಚಿನ ಮಾಹಿತಿ ಕಲೆ ಹಾಕಲಾಗುತ್ತಿದೆ ಎಂದು ಹೇಳಿದ್ದಾರೆ.

ಡ್ರಗ್ಸ್ ಮಾಫಿಯ ಕುರಿತು ಚಲನಚಿತ್ರ ನಿರ್ದೇಶಕ ಇಂದ್ರಜಿತ್ ಲಂಕೇಶ್ ಅವರ ಹೇಳಿಕೆಯನ್ನು ಪರಿಗಣಿಸುತ್ತೇವೆ ಎಂದಿರುವ ಸಂದೀಪ್ ಪಾಟೀಲ್, ಡ್ರಗ್ಸ್ ಸಂಬಂಧ ವಾಟ್ಸಪ್ ಮತ್ತು ಫೋನ್ ಮೂಲಕ ಕೆಲವರು ಮಾಹಿತಿ ನೀಡುತ್ತಿದ್ದಾರೆ. ಯಾರೇ ಮಾಹಿತಿ ಕೊಟ್ಟರೂ ತನಿಖೆ ನಡೆಸಲಾಗುತ್ತದೆ ಎಂದು ಹೇಳಿದ್ದಾರೆ.

Facebook Comments