ದುರ್ಗಾಷ್ಟಮಿ ಪ್ರಯುಕ್ತ ರಾಷ್ಟ್ರಪತಿ, ಪ್ರಧಾನಿ ಸೇರಿದಂತೆ ಗಣ್ಯರಿಂದ ಶುಭಾಶಯ

ಈ ಸುದ್ದಿಯನ್ನು ಶೇರ್ ಮಾಡಿ

ನವದೆಹಲಿ, ಅ.6- ದುರ್ಗಾಷ್ಟಮಿ ಪ್ರಯುಕ್ತ ರಾಷ್ಟ್ರಪತಿ ರಾಮನಾಥ್ ಕೋವಿಂದ್, ಉಪ ರಾಷ್ಟ್ರಪತಿ ಡಾ.ಎಂ.ವೆಂಕಯ್ಯ ನಾಯ್ಡು, ಪ್ರಧಾನಮಂತ್ರಿ ನರೇಂದ್ರ ಮೋದಿ ಸೇರಿದಂತೆ ಅನೇಕ ಗಣ್ಯಾತಿಗಣ್ಯರು ದೇಶದ ಜನರಿಗೆ ಶುಭ ಕೋರಿದ್ದಾರೆ. ಮಾಜಿ ಪ್ರಧಾನಮಂತ್ರಿಗಳಾದ ಎಚ್.ಡಿ.ದೇವೇಗೌಡರು, ಡಾ. ಮನಮೋಹನ್ ಸಿಂಗ್, ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ,

ಪಕ್ಷದ ಮುಖಂಡ ರಾಹುಲ್ ಗಾಂಧಿ, ಕೇಂದ್ರ ಸಚಿವರಾದ ಅಮಿತ್ ಶಾ, ರಾಜನಾಥ್ ಸಿಂಗ್, ನಿರ್ಮಲಾ ಸೀತಾರಾಮನ್, ಸ್ಮೃತಿ ಇರಾನಿ, ಡಿ.ವಿ.ಸದಾನಂದ ಗೌಡ, ಪ್ರಹ್ಲಾದ್ ಜೋಷಿ, ವಿವಿಧ ರಾಜ್ಯಗಳ ಮುಖ್ಯಮಂತ್ರಿಗಳು ಮತ್ತು ರಾಜಕೀಯ ಪಕ್ಷಗಳ ನಾಯಕರು ದುರ್ಗಾಷ್ಟಮಿ ಶುಭಾಶಯ ಸಲ್ಲಿಸಿದ್ದಾರೆ.

ಈ ಕುರಿತು ಟ್ವೀಟ್ ಮಾಡಿರುವ ರಾಷ್ಟ್ರಪತಿ ರಾಮನಾಥ್ ಕೋವಿಂದ್, ದುರ್ಗಾಷ್ಟಮಿ ದುಷ್ಟ ಶಕ್ತಿಗಳ ವಿರುದ್ಧ ಜಯ ಸಾಧಿಸಿದ ದಿನವನ್ನು ದುರ್ಗಾಷ್ಟಮಿಯನ್ನಾಗಿ ಆಚರಿಸಲಾಗುತ್ತದೆ. ಮಾತೆ ಮಹಾ ದುರ್ಗೆ ದುಷ್ಟರನ್ನು ಸಂಹರಿಸಿ ನಮಗೆಲ್ಲಾ ರಕ್ಷಣೆ ನೀಡಿ ಸುಖ, ಸಂತೋಷ, ನೆಮ್ಮದಿ ಮತ್ತು ಸಮೃದ್ಧಿ ದಯಪಾಲಿಸಲಿದ್ದಾಳೆ ಎಂದು ಹೇಳಿದ್ದಾರೆ.

ದುರ್ಗಾಷ್ಟಮಿ ಪೂಜೆ ಮತ್ತು ನವರಾತ್ರಿ ಸಂದರ್ಭದಲ್ಲಿ ದೇಶವಾಸಿಗಳಿಗೆ ಶುಭಾಶಯಗಳು. ಈ ಹಬ್ಬವು ದೇಶದ ಸಮಸ್ತ ಜನರಿಗೆ ಸನ್ಮಂಗಳಕರವಾಗಲಿ ಎಂದು ಪ್ರಧಾನಿ ನರೇಂದ್ರ ಮೋದಿ ಶುಭ ಕೋರಿದ್ದಾರೆ.

Facebook Comments