ಪಶ್ಚಿಮ ಬಂಗಾಳದಲ್ಲಿ ಲಘು ಭೂಕಂಪ

ಈ ಸುದ್ದಿಯನ್ನು ಶೇರ್ ಮಾಡಿ

ಕೊಲ್ಕತಾ, ಮೇ 26- ಪಶ್ಚಿಮ ಬಂಗಾಳದ ಬಂಕೂರ ಜಿಲ್ಲೆಯಲ್ಲಿ ಇಂದು ಬೆಳಗ್ಗೆ ಲಘು ಭೂಕಂಪ ಸಂಭವಿಸಿದೆ. ರಿಕ್ಟರ್ ಮಾಪಕದಲ್ಲಿ 4.8ರಷ್ಟು ಭೂಕಂಪದ ತೀವ್ರತೆ ದಾಖಲಾಗಿತ್ತು. ಲಘು ಭೂಕಂಪದಿಂದ ಯಾವುದೇ ಸಾವು-ನೋವು ಮತ್ತು ಆಸ್ತಿ-ಪಾಸ್ತಿ ನಷ್ಟದ ವರದಿಯಾಗಿಲ್ಲ.

ಬಂಕುರ ಜಿಲ್ಲೆಯಲ್ಲಿ ಭೂಮಿ ಕಂಪಿಸಿದ ಅನುಭವವಾಗಿದೆ. ಭೂಮಿಯ ಮೇಲ್ಮೈಯಿಂದ 10 ಕಿ.ಮೀ ಆಳದಲ್ಲಿ ಭೂಕಂಪದ ಕೇಂದ್ರ ಬಿಂದು ದಾಖಲಾಗಿತ್ತು ಎಂದು ಭೂಗರ್ಭ ಅಧ್ಯಯನ ಕೇಂದ್ರದ ಹಿರಿಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

Facebook Comments

( ಎಚ್ಚರಿಕೆ..! : ಈ ಸಂಜೆ ಸುದ್ದಿಗಳನ್ನು ನಕಲು ಮಾಡುವವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗುತ್ತಿದೆ ) > #ವಾಟ್ಸಾಪ್‌ನಲ್ಲಿ ಸುದ್ದಿಗಳನ್ನು ಪಡೆಯಲು 7795582478 ಸಂಖ್ಯೆಯನ್ನು ನಿಮ್ಮ ಮೊಬೈಲ್ ನಲ್ಲಿ SAVE ಮಾಡಿಕೊಂಡು HI EESANJE ಎಂದು ಸಂದೇಶ ಕಳಿಸಿ