ED ಮತ್ತು ITಇಲಾಖೆಗಳ ಮೂಲಕ ಕಾಂಗ್ರೆಸ್ ಪಕ್ಷವನ್ನು ಮುಗಿಸಲು ಕೇಂದ್ರದ ಸಂಚು : ಗುಂಡೂರಾವ್ ಆರೋಪ

ಈ ಸುದ್ದಿಯನ್ನು ಶೇರ್ ಮಾಡಿ

dinesh--gundurao

ವಿಜಯಪುರ, ಫೆ.16-ಆದಾಯ ತೆರಿಗೆ ಇಲಾಖೆ, ಜಾರಿ ನಿರ್ದೇಶನಾಲಯದ ಮೂಲಕ ಕಾಂಗ್ರೆಸ್ ಪಕ್ಷವನ್ನು ಮುಗಿಸುವ ಸಂಚನ್ನು ಕೇಂದ್ರ ಸರ್ಕಾರ ಮಾಡುತ್ತಿದೆ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ದಿನೇಶ್ ಗುಂಡೂರಾವ್ ಗಂಭೀರ ಆರೋಪ ಮಾಡಿದ್ದಾರೆ.  ಕಾಂಗ್ರೆಸ್ ಸರ್ಕಾರವನ್ನು ಪತನ ಮಾಡುವುದು ಕೇಂದ್ರ ಸರ್ಕಾರದ ಉದ್ದೇಶವಾಗಿದೆ. ಪಕ್ಷ ಹಾಗೂ ಸದಸ್ಯರ ಹೆಸರನ್ನು ಹಾಳು ಮಾಡುವುದು ಇವರ ಕÉಲಸವಾಗಿದೆ. ಇಡೀ ದೇಶದಲ್ಲಿ ಬಿಜೆಪಿ ಸದಸ್ಯರ ಮೇಲೆ ಕೇಂದ್ರ ಸರ್ಕಾರ ಐಟಿ ದಾಳಿ ನಡೆಸಿಲ್ಲ. ಆದರೆ ಕಾಂಗ್ರೆಸ್ ಪಕ್ಷದವರ ಮೇಲೆ ನಿರಂತರ ಐಟಿ ದಾಳಿ ನಡೆಸುವ ಮೂಲಕ ಪಕ್ಷವನ್ನು ಮುಗಿಸುವ ಸಂಚು ಮಾಡಿದೆ ಎಂದು ಹೇಳಿದರು.  ಕೇಂದ್ರದ ಈ ಕ್ರಮ ಕೇಂದ್ರಸರ್ಕಾರಕ್ಕೇ ತಿರುಗುಬಾಣವಾಗಲಿದೆ ಎಂದು ಎಚ್ಚರಿಸಿದರು.

ಕೇಂದ್ರ ಸರ್ಕಾರದ ವೈಫಲ್ಯ ಕುರಿತು ಜನರಲ್ಲಿ ಅರಿವು ಮೂಡಿಸುವ ಕಾರ್ಯಕ್ರಮಗಳನ್ನು ಮುಂದೆ ಹಮ್ಮಿಕೊಳ್ಳಲಾಗುವುದು. 2018ರ ಚುನಾವಣೆಗೆ ತಯಾರಿ ಮಾಡಿಕೊಳ್ಳಲಾಗುತ್ತದೆ. ಮುಂದಿನ ಚುನಾವಣೆಯಲ್ಲೂ ಕೂಡ ಕಾಂಗ್ರೆಸ್ ಅಧಿಕಾರಕ್ಕೆ ಬರಲಿದೆ. ಉಪಚುನಾವಣೆ ದಿನಾಂಕ ಪ್ರಕಟವಾದ ನಂತರ ಅಭ್ಯರ್ಥಿಗಳ ಘೋಷಣೆ ಮಾಡಲಾಗುವುದು ಎಂದು ಗುಂಡೂರಾವ್ ಹೇಳಿದರು.  ಮಾಜಿ ಸಚಿವ ಶ್ರೀನಿವಾಸ್‍ಪ್ರಸಾದ್ ಹಾಗೂ ಮಾಜಿ ಮುಖ್ಯಮಂತ್ರಿ ಎಸ್.ಎಂ.ಕೃಷ್ಣ ಅವರಿಗೆ ಅಧಿಕಾರವಿದ್ದಾಗ ಕಾಂಗ್ರೆಸ್ ಪಕ್ಷ ಸರಿಯಿತ್ತು. ಆದರೆ ಅವರ ಅಧಿಕಾರ ಹೋದ ಮೇಲೆ ಕಾಂಗ್ರೆಸ್ ಪಕ್ಷ ಹಿರಿಯರನ್ನು ಕಡೆಗಣಿಸುತ್ತಿದೆ ಎನ್ನುವುದು ತಪ್ಪು. ಬಿಜೆಪಿ ಹಾಗೂ ಜೆಡಿಎಸ್ ಪಕ್ಷದಿಂದ ಕಾಂಗ್ರೆಸ್‍ಗೆ ಬಹಳಷ್ಟು ಜನ ಬರುವ ನಿರೀಕ್ಷೆ ಇದೆ ಎಂದು ಹೇಳಿದರು.

ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಅವರಿಗೆ ಕಾಂಗ್ರೆಸ್ ಪಕ್ಷವನ್ನು ಟೀಕೆ ಮಾಡುವುದೇ ಒಂದು ಕೆಲಸವಾಗಿದೆ. ಅವರಿಗೆ ತಾಕತ್ತು, ಧೈರ್ಯವಿದ್ದರೆ ಅವರು ಡೈರಿ ಬಿಡುಗಡೆ ಮಾಡಲಿ. ಅಧಿಕಾರಿಗಳ ಮನೆ ಮೇಲೆ ಐಟಿ ರೈಡ್ ಮಾಹಿತಿ ಲೀಕ್ ಮಾಡುವುದು ಬಿಜೆಪಿಯವರ ಕೆಲಸ ತಪ್ಪು ಎಂದರು.

< Eesanje News 24/7 ನ್ಯೂಸ್ ಆ್ಯಪ್  >

 Click Here to Download  :  Android / iOS  

Facebook Comments

( ಎಚ್ಚರಿಕೆ..! : ಈ ಸಂಜೆ ಸುದ್ದಿಗಳನ್ನು ನಕಲು ಮಾಡುವವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗುತ್ತಿದೆ ) > #ವಾಟ್ಸಾಪ್‌ನಲ್ಲಿ ಸುದ್ದಿಗಳನ್ನು ಪಡೆಯಲು 7795582478 ಸಂಖ್ಯೆಯನ್ನು ನಿಮ್ಮ ಮೊಬೈಲ್ ನಲ್ಲಿ SAVE ಮಾಡಿಕೊಂಡು HI EESANJE ಎಂದು ಸಂದೇಶ ಕಳಿಸಿ

Sri Raghav

Admin