ಕಾಂಗ್ರೆಸ್‌ನ ಮಾತೊಬ್ಬ ನಾಯಕನಿಗೆ ಇಡಿ ನೋಟಿಸ್

ಈ ಸುದ್ದಿಯನ್ನು ಶೇರ್ ಮಾಡಿ

ಬೆಂಗಳೂರು,ಅ.23- ಬೇನಾಮಿ ಆಸ್ತಿ ವಹಿವಾಟು ಸಂಬಂಧ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ವಿಜಯ್ ಮುಳಗುಂದಗೆ ವಿಚಾರಣೆಗೆ ಹಾಜರಾಗುವಂತೆ ಜಾರಿ ನಿರ್ದೇಶನಾಲಯ(ಇಡಿ) ನೋಟಿಸ್ ಜಾರಿ ಮಾಡಿದೆ.

ಈಗಾಗಲೇ ತಿಹಾರ್ ಜೈಲಿನಲ್ಲಿರುವ ಮಾಜಿ ಸಚಿವ ಡಿ.ಕೆ.ಶಿವಕುಮಾರ್ ಮನೆ ಮತ್ತು ಕಚೇರಿ ಮೇಲೆ ಆದಾಯ ತೆರಿಗೆ(ಐಟಿ) ಅಧಿಕಾರಿಗಳು ದಾಳಿ ನಡೆಸಿದ ಸಂದರ್ಭದಲ್ಲೇ ವಿಜಯ್ ಮುಳಗುಂದ ಮನೆ ಮೇಲೂ ದಾಳಿಯಾಗಿತ್ತು.

ಶಿವಕುಮಾರ್ ಜೊತೆ ವ್ಯವಹಾರ ಒಡನಾಟ ಇಟ್ಟುಕೊಂಡಿದ್ದ ಮುಳಗುಂದ ಅವರ ನಿವಾಸ ಮತ್ತು ಕಚೇರಿಯಲ್ಲಿ ನಗದು, ಕೆಲವು ದಾಖಲೆಗಳು ಐಟಿ ಅಧಿಕಾರಿಗಳಿಗೆ ಸಿಕ್ಕಿಬಿದ್ದಿದ್ದವು. ಈ ಹಿನ್ನೆಲೆಯಲ್ಲಿ ವಿಚಾರಣೆಗೆ ಹಾಜರಾಗುವಂತೆ ಇಡಿ ನೋಟಿಸ್ ಜಾರಿ ಮಾಡಿದೆ.

Facebook Comments