ಜಾಮೀನು ಸಿಕ್ಕ ಗುಡ್ ನ್ಯೂಸ್ ಬೆನ್ನಲ್ಲೇ ಡಿಕೆಶಿಗೆ ಮತ್ತೊಂದು ಬ್ಯಾಡ್ ನ್ಯೂಸ್..!

ಈ ಸುದ್ದಿಯನ್ನು ಶೇರ್ ಮಾಡಿ

ನವದೆಹಲಿ, ಅ.24- ಬೇನಾಮಿ ಆಸ್ತಿ ವಹಿವಾಟು ಪ್ರಕರಣದಲ್ಲಿ ದೆಹಲಿ ಹೈಕೋರ್ಟ್ ಮಾಜಿ ಸಚಿವ ಡಿ.ಕೆ.ಶಿವಕುಮಾರ್‍ಗೆ ಜಾಮೀನು ನೀಡಿರುವುದನ್ನು ಪ್ರಶ್ನಿಸಿ ಜಾರಿನಿರ್ದೇಶನಾಲಯ ಮೇಲ್ಮನವಿ ಸಲ್ಲಿಸಿದೆ.

ಜಾರಿ ನಿರ್ದೇಶನಾಲಯದ ಪರ ವಕೀಲ ಕೆ.ಎಂ.ನಟರಾಜ್ ಅವರು ದೆಹಲಿ ಹೈಕೋರ್ಟ್ ತೀರ್ಪು ಪ್ರಶ್ನಿಸಿ ಸುಪ್ರೀಂಕೋರ್ಟ್‍ಗೆ ಮೇಲ್ಮನವಿ ಸಲ್ಲಿಸಿದ್ದು, ಗುರುವಾರ ಇದರ ವಿಚಾರಣೆ ನಡೆಯಲಿದೆ.

ಬುಧವಾರ ದೆಹಲಿ ಹೈಕೋರ್ಟ್ ಏಕಸದಸ್ಯ ಪೀಠದ ನ್ಯಾಯಮೂರ್ತಿ ಸುರೇಶ್‍ಕುಮಾರ್ ಕೈಟಾ ಅವರು ಡಿ.ಕೆ.ಶಿವಕುಮಾರ್ ಅವರಿಗೆ ಷರತ್ತುಬದ್ಧ ಜಾಮೀನು ನೀಡಿದ್ದರು. ಶಿವಕುಮಾರ್ ಪ್ರಭಾವಿ ವ್ಯಕ್ತಿಯಾಗಿದ್ದು ಅವರಿಗೆ ಜಾಮೀನು ನೀಡದಂತೆ ಇಡಿ ಪರ ವಕೀಲರು ನ್ಯಾಯಾಧೀಶರಿಗೆ ಮನವಿ ಮಾಡಿದ್ದರು.

ಆರೋಪಿಯು ಅತ್ಯಂತ ಪ್ರಭಾವಿ ವ್ಯಕ್ತಿಯಾಗಿರುವುದರಿಂದ ಸಾಕ್ಷಾಧಾರಗಳನ್ನು ನಾಶಪಡಿಸಲಿದ್ದಾರೆ. ಹೀಗಾಗಿ ಅವರ ಜಾಮೀನು ಅರ್ಜಿಯನ್ನು ವಜಾ ಮಾಡುವಂತೆ ನಟರಾಜ್ ಕೋರಿದ್ದರು. ಆದರೆ ದೆಹಲಿ ಹೈಕೋರ್ಟ್ ಶಿವಕುಮಾರ್‍ಗೆ ಬುಧವಾರ ಜಾಮೀನು ಮಂಜೂರು ಮಾಡಿತ್ತು.

Facebook Comments

Sri Raghav

Admin