ಎಸ್ಸೆಸ್ಸೆಲ್ಸಿ ಪರೀಕ್ಷೆ ರದ್ದಾಗಿದೆ ಎಂಬ ಸುದ್ದಿ ಸುಳ್ಳು : ಸುರೇಶ್ ಕುಮಾರ್

ಈ ಸುದ್ದಿಯನ್ನು ಶೇರ್ ಮಾಡಿ

ಬೆಂಗಳೂರು ಮಾ 26 .ಎಸ್ಸೆಸ್ಸೆಲ್ಸಿ ಪರೀಕ್ಷೆ ರದ್ದಾಗಿದೆ ಎಂದು ಹರಡುತ್ತಿರುವ ವದಂತಿ ಶುದ್ಧ ಸುಳ್ಳು ಎಂದು ಶಿಕ್ಷಣ ಸಚಿವ ಸುರೇಶ್ ಕುಮಾರ್ ಇಂದಿಲ್ಲಿ ತಿಳಿಸಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು ಇಂತಹ ವದಂತಿಯನ್ನು ಹೊರಡಿಸಲಾಗುತ್ತಿದ್ದು ಇದಕ್ಕೇ ವಿದ್ಯಾರ್ಥಿಗಳು ಕಿವಿಗೊಡಬಾರದು ಮತ್ತು ಪೋಷಕರು ಕೂಡ ಆತಂಕಗೊಳ್ಳಬಾರದು ಎಂದು ಮನವಿ ಮಾಡಿದ್ದಾರೆ.

ಸದ್ಯ ನಿಮ್ಮ ಆರೋಗ್ಯದ ಬಗ್ಗೆ ಮುತುವರ್ಜಿ ವಹಿಸಿ ದೇಶಾದ್ಯಂತ ಇಪ್ಪತ್ತೊಂದು ದಿನಗಳ ಲಾಕ್ ಡೌನ್ ಬಗ್ಗೆ ಆತಂಕ ಬೇಡ ಅಗತ್ಯ ವಸ್ತುಗಳು ನಿಮಗೆ ಸಿಗುತ್ತವೆ ಎಂದು ಹೇಳಿದ್ದಾರೆ.

Facebook Comments

Sri Raghav

Admin