ಈದ್ ಮಿಲಾದ್ ಆಚರಣೆಗೆ ಮಾರ್ಗಸೂಚಿ ಪಾಲನೆ ಕಡ್ಡಾಯ

ಈ ಸುದ್ದಿಯನ್ನು ಶೇರ್ ಮಾಡಿ

ಬೆಂಗಳೂರು,ಅ.28- ರಾಜ್ಯದಲ್ಲಿ ಕೊರೊನಾ ಸೋಂಕು ಹಬ್ಬದಂತೆ ಮುನ್ನೆಚ್ಚರಿಕೆ ಕ್ರಮ ತೆಗೆದುಕೊಂಡಿರುವ ಸರ್ಕಾರ ಇದೇ 30ರಂದು(ಶುಕ್ರವಾರ) ಆಚರಿಸಲಾಗುವ ಮುಸ್ಲಿಮರ ಪವಿತ್ರ ಹಬ್ಬ ಈದ್ ಮಿಲಾದ್ ದಿನದಂದು ಕೆಲವು ಮಾರ್ಗಸೂಚಿಗಳನ್ನು ಕಡ್ಡಾಯ ವಾಗಿ ಪಾಲನೆ ಮಾಡುವಂತೆ ಮನವಿ ಮಾಡಿದೆ.

ಈ ಸಂಬಂಧ ವಕ್ಫ್ ಇಲಾಖೆ ಮೂಲಕ ಮಾರ್ಗಸೂಚಿಗಳನ್ನು ಬಿಡುಗಡೆ ಮಾಡಲಾಗಿದ್ದು, ರಾಜ್ಯ ಸರ್ಕಾರ ನೀಡಿರುವ ಆದೇಶಗಳಂತೆ ಹಾಗೂ ಕರ್ನಾಟಕ ರಾಜ್ಯ ವಕ್ಪ್ ಮಂಡಳಿಯ ಮಾರ್ಗಸೂಚಿಗಳಂತೆ ಹಬ್ಬ ಆಚರಿಸಬೇಕೆಂದು ಬೆಂಗಳೂರು ನಗರ ಉತ್ತರ ಜಿಲ್ಲೆಯ ವಕ್ಫ್ ಅಧಿಕಾರಿ ರಝಿಯಾ ಸುಲ್ತಾನಾ ಕೋರಿದ್ದಾರೆ.

ಯಾವುದೇ ರೀತಿಯ ಸಾಮೂ ಹಿಕ ಮೆರವಣಿಗೆ ಜುಲೂಸ್, ತೆರೆದ ಸ್ಥಳಗಳಲ್ಲಿ ಒಂದೆಡೆ ಸೇರುವುದನ್ನು ಕಡ್ಡಾಯವಾಗಿ ನಿಷೇಧಿಸಲಾಗಿದೆ. ಹಾಗೂ ಮೊಹಲ್ಲಾಗಳಲ್ಲಿ ನಡೆಯುವ ಯಾವುದೇ ರೀತಿಯ ಹಗಲು ಮತ್ತು ರಾತ್ರಿಯ ಪ್ರವಚನ ಕಾರ್ಯಕ್ರಮ/ಸಾಂಸ್ಕೃತಿಕ ಸಭೆ ಸಮಾರಂಭಗಳನ್ನು ಕಡ್ಡಾಯವಾಗಿ ನಿಷೇಧಿಸಲಾಗಿದೆ ಎಂದು ಅವರು ತಿಳಿಸಿದ್ದಾರೆ.

ಮಸೀದಿಗಳು, ದರ್ಗಾಗಳಲ್ಲಿ ಸಾಮಾಜಿಕ ಅಂತರ ಹಾಗೂ ಕೋವಿಡ್-19 ನಿಯಮಗಳೊಂದಿಗೆ ಸಾಕಷ್ಟು ಮುನ್ನೆಚ್ಚರಿಕೆ ಕ್ರಮಗಳ ಮೂಲಕ ದೈಹಿಕ ಅಂತರ ಕಾಪಾಡಿಕೊಂಡು ನೆರವೇರಿಸುವುದು. ಸಾರ್ವಜನಿಕ ಪ್ರದೇಶಗಳಲ್ಲಿ ಧ್ವನಿವರ್ಧಕ ಡಿಜಿಟಲ್ ಸೌಂಡ್ ಸಿಸ್ಟಮ್ ಡಿಜೆ ಬಳಕೆ ನಿಷೇಧಿಸಲಾಗಿದೆ.

ಮಾಸ್ಕ್, ಗ್ಲೌಸ್ ಕಡ್ಡಾಯವಾಗಿ ಎಲ್ಲರೂ ಉಪಯೋಗಿಸಬೇಕು. 60 ವರ್ಷ ಮೇಲ್ಪಟ್ಟ ಹಿರಿಯ ನಾಗರಿಕರು ಹಾಗೂ 10 ವರ್ಷದೊಳಗಿನ ಮಕ್ಕಳು ಮನೆಯಲ್ಲಿ ಹಬ್ಬವನ್ನು ಆಚರಿಸುವುದು. ಪ್ರವೇಶ ದ್ವಾರಗಳಲ್ಲಿ ಸ್ಯಾನಿಟೈಸರ್ ಹಾಗೂ ಸೋಪಿನೊಂದಿಗೆ ಕೈತೊಳೆಯಲು ಸೂಕ್ತ ವ್ಯವಸ್ಥೆಯನ್ನು ಮಾಡು ವುದು ಕಡ್ಡಾಯ ಎಲ್ಲರೂ 6 ಅಡಿ ಸಾಮಾಜಿಕ ಅಂತರವನ್ನು ಕಾಯ್ದುಕೊಳ್ಳುವುದು. ಖಬರಸ್ಥಾನ ಒಳಗೊಂಡಂತೆ ಯಾವುದೇ ರೀತಿಯ ತೆರೆದ ಜಗದಲ್ಲಿ ಪ್ರಾರ್ಥನೆ ಪ್ರವಚನ ಮುಂತಾದ ವುಗಳನ್ನು ಆಯೋಜಿಸುವಂತಿಲ್ಲ ಎಂದು ಮಾರ್ಗಸೂಚಿಯಲ್ಲಿ ತಿಳಿಸಲಾಗಿದೆ.

ಸರ್ಕಾರದ ಸುತ್ತೋಲೆಯಲ್ಲಿ ಧಾರ್ಮಿಕ ಸ್ಥಳಗಳಲ್ಲಿ ಅನುಸರಿಸ ಬೇಕಾದ ಮಾರ್ಗಸೂಚಿಗಳನ್ನು ಪಾಲಿಸುವುದು. ಈದ್ ಮಿಲಾದ್ ಹಬ್ಬದ ಆಚರಣೆ ಕುರಿತು ಜಿಲ್ಲಾಡಳಿತ ಹಾಗೂ ಪೆÇಲೀಸ್ ಇಲಾಖೆ ನೀಡಿರುವ ಮಾರ್ಗಸೂಚಿಗಳನ್ನು ಕಡ್ಡಾಯವಾಗಿ ಪಾಲಿಸುವಂತೆ ಮನವಿ ಮಾಡಲಾಗಿದೆ.

Facebook Comments