ಗಡಿ ಜಿಲ್ಲೆಗಳಲ್ಲಿ ಸಿದ್ದರಾಮಯ್ಯ ಚುನಾವಣಾ ಪ್ರಚಾರ

ಈ ಸುದ್ದಿಯನ್ನು ಶೇರ್ ಮಾಡಿ

ಬೆಂಗಳೂರು, ಮಾ.26- ಕರ್ನಾಟಕದಲ್ಲಷ್ಟೇ ಅಲ್ಲದೆ ನೆರೆ ರಾಜ್ಯಗಳ ಗಡಿ ಜಿಲ್ಲೆಗಳಲ್ಲಿ ಪ್ರಭಾವಿಯಾಗಿರುವ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನಾಳೆ ತಮಿಳುನಾಡು ರಾಜ್ಯದ ಕೃಷ್ಣಗಿರಿ ಜಿಲ್ಲೆಯಲ್ಲಿ ಚುನಾವಣಾ ಪ್ರಚಾರದಲ್ಲಿ ಭಾಗವಹಿಸಲಿದ್ದಾರೆ.

ತಳಿ, ಡೆಂಕಣಿಕೋಟಾ, ಹೊಸೂರು, ಬಾಗಲೂರು, ಬೇರಿಗೆ, ಸೂಲಗಿರಿ, ವೇಪನಹಳ್ಳಿ ಕ್ಷೇತ್ರಗಳಲ್ಲಿ ಸಿದ್ದರಾಮಯ್ಯ ಅವರು, ಕಾಂಗ್ರೆಸ್ ಅಭ್ಯರ್ಥಿಗಳ ಪರವಾಗಿ ಪ್ರಚಾರ ನಡೆಸಲಿದ್ದಾರೆ. ಸಿದ್ದರಾಮಯ್ಯ ಅವರು ಆಂಧ್ರ ಮತ್ತು ತಮಿಳುನಾಡು ಜಿಲ್ಲೆಗಳ ಗಡಿ ಭಾಗಗಳಲ್ಲಿ ಹೆಚ್ಚು ಜನಪ್ರಿಯರಾಗಿದ್ದಾರೆ.

ಹೀಗಾಗಿ ಈ ಮೊದಲು ನಡೆದ ವಿಧಾನಸಭೆ, ಲೋಕಸಭೆ ಚುನಾವಣೆ ಸಂದರ್ಭದಲ್ಲಿಯೂ ಸಿದ್ದರಾಮಯ್ಯ ಅವರು ಗಡಿ ಜಿಲ್ಲೆಗಳಲ್ಲಿ ಪ್ರವಾಸ ಮಾಡಿ ಪ್ರಚಾರ ಮಾಡಿದ್ದರು.

ಸಿದ್ದರಾಮಯ್ಯ ಪ್ರಚಾರ ಮಾಡಿದ್ದ ಬಹುತೇಕ ಕಡೆಗಳಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳು ಗೆದ್ದಿದ್ದರು. ಈಗ ತಮಿಳುನಾಡು ಗಡಿ ಜಿಲ್ಲೆಗಳಲ್ಲಿ ಸಿದ್ದರಾಮಯ್ಯ ಅವರು ಪ್ರಚಾರಕ್ಕೆ ತೆರಳುತ್ತಿದ್ದಾರೆ.

Facebook Comments