ಸದ್ಯದಲ್ಲೇ ರಸ್ತೆಗಿಳಿಯಲಿದೆ ಎಲೆಕ್ಟ್ರಿಕ್ ಬಸ್‍ಗಳು

ಈ ಸುದ್ದಿಯನ್ನು ಶೇರ್ ಮಾಡಿ

ಬೆಂಗಳೂರು, ಅ.5- ಪರಿಸರ ಮಾಲಿನ್ಯ ತಡೆಗಟ್ಟುವ ಹಾಗೂ ಸುಲಲಿತ , ಸುಗಮ , ಗುಣಮಟ್ಟದ ಸೇವೆ ಒದಗಿಸುವ ನಿಟ್ಟಿನಲ್ಲಿ ಕೆಎಸ್‍ಆರ್‍ಟಿಸಿ ಹಾಗೂ ಬಿಎಂಟಿಸಿಗೆ ಸದ್ಯದಲ್ಲಿಯೇ ಎಲೆಕ್ಟ್ರಿಕ್ ಬಸ್‍ಗಳು ಲಭಿಸಲಿವೆ.

ಈಗಾಗಲೇ ಸ್ಮಾರ್ಟ್ ಸಿಟಿ ಯೋಜನೆಯಡಿಯಲ್ಲಿ ಬಿಎಂಟಿಸಿಗೆ 90 ಹಾಗೂ ಕೆಎಸ್‍ಆರ್‍ಟಿಸಿಗೆ (ಅಂತರ ನಗರ ಸಂಚಾರ) 50 ಬಸ್‍ಗಳನ್ನು ಖರೀದಿಸಲು ಈಗಾಗಲೇ ಟೆಂಡರ್ ಪ್ರಕ್ರಿಯೆ ನಡೆದಿದ್ದು, ಅದು ಅಂತಿಮ ಹಂತ ತಲುಪಿದೆ.

ಈಗಾಗಲೇ ಕೆಎಸ್‍ಆರ್‍ಟಿಸಿ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಹಾಗೂ ಮೈಸೂರಿಗೆ ಎಲೆಕ್ಟ್ರಿಕ್ ಬಸ್ ಸೇವೆ ಆರಂಭಿಸಿದೆ. ಇದು ಫಲಕಾರಿಯಾಗಿರುವ ಹಿನ್ನೆಲೆಯಲ್ಲಿ ಖರೀದಿಗಾಗಿ ಈಗಾಗಲೇ ಪ್ರಸ್ತಾವನೆ ಸಲ್ಲಿಸಲಾಗಿದೆ.

ಬಿಡ್ಡಿಂಗ್ ಪ್ರಕ್ರಿಯೆಗಳು ಪೂರ್ಣಗೊಳ್ಳುತ್ತಿದ್ದು , ಸಾರಿಗೆ ಇಲಾಖೆಯ ಪ್ರಧಾನ ಕಾರ್ಯದರ್ಶಿಗಳ ಬಳಿ ಕಡಿತವಿದ್ದು, ಇದರ ಬಗ್ಗೆ ಅಂತಿಮ ನಿರ್ಧಾರ ಕೈಗೊಳ್ಳುವ ಸಾಧ್ಯತೆ ಇದೆ.

ಡಿಸಿಎಂ ಲಕ್ಷ್ಮಣ ಸವದಿ ಕೂಡ ಇದರ ಬಗ್ಗೆ ಪರಿಶೀಲನೆ ನಡೆಸಿದ್ದು, ಹಣಕಾಸಿನ ಲಭ್ಯತೆ ಅನುಗುಣವಾಗಿ ಬಸ್‍ಗಳನ್ನು ಖರೀದಿಸಲು ಚಿಂತನೆ ನಡೆಸಲಾಗಿದೆ.

ಕೇಂದ್ರ ಸರ್ಕಾರ ಕೂಡ ತನ್ನ ಪಾಲಿನ ಹಣ ನೀಡುವುದರಿಂದ ರಾಜ್ಯ ಸರ್ಕಾರ ಕೂಡ ಸಾರಿಗೆ ಇಲಾಖೆಗೆ ಅನುದಾನ ಬಿಡುಗಡೆ ಮಾಡಬೇಕಾಗಿದೆ. ಈ ಎಲ್ಲಾ ಪ್ರಕ್ರಿಯೆಗಳು ಸದ್ಯದಲ್ಲಿಯೇ ಪೂರ್ಣಗೊಳ್ಳುವ ವಿಶ್ವಾಸವಿದ್ದರೂ ಸಹ ಕೊರೊನಾ ಸಂಕಷ್ಟ ದೂರವಾದ ನಂತರ ಬಸ್‍ಗಳು ರಸ್ತೆಗಿಳಿಯುವ ಸಾಧ್ಯತೆ ಇದೆ ಎಂದು ಹೇಳಲಾಗುತ್ತಿದೆ.

Facebook Comments

Sri Raghav

Admin