ಕಾಫಿ ತೋಟದ ಬಳಿ ಆನೆ ಮೃತದೇಹ ಪತ್ತೆ

ಈ ಸುದ್ದಿಯನ್ನು ಶೇರ್ ಮಾಡಿ

ಚಿಕ್ಕಮಗಳೂರು, ಜು.14- ಮೂಡಿಗೆರೆ ತಾಲ್ಲೂಕಿನ ಕುಂದೂರು ಗ್ರಾಮದಲ್ಲಿ ಕಾಡಾನೆಯೊಂದು ಸಾವನ್ನಪ್ಪಿದೆ. ಚಂದ್ರೆಗೌಡ ಎಂಬುವರ ಕಾಫಿ ತೋಟದ ಬೇಲಿಯ ಬಳಿ 8 ವರ್ಷ ಪ್ರಾಯದ ಗಂಡು ಆನೆ ಕಳೇಬರ ಪತ್ತೆಯಾಗಿದೆ ತಕ್ಷಣವೇ ಸ್ಥಳೀಯರು ಆಲ್ದೂರು ಅರಣ್ಯ ಅಧಿಕಾರಿಗಳಿಗೆ ಮಾಹಿತಿ ನೀಡಿದ್ದಾರೆ.ಅರಣ್ಯ ಅಧಿಕಾರಿಗಳು ಸ್ಥಳಕ್ಕಾಗಮಿಸಿ ಪರಿಶೀಲನೆ ನಡೆಸಿದರು ಆನೆ ಶುಕ್ರವಾರ ಮೃತಪಟ್ಟಿರಬಹುದೆಂದು ಶಂಕಿಸಲಾಗಿದೆ.

ಆನೆಯ ಸಾವಿಗೆ ನಿಖರವಾದ ಕಾರಣ ತಿಳಿದು ಬಂದಿಲ್ಲ ಮರಣೋತ್ತರ ಪರೀಕ್ಷೆ ನಡೆಸಿದ ನಂತರ ನಿಖರ ಕಾರಣ ಗೊತ್ತಾಗಲಿದೆ ಎಂದು ಅರಣ್ಯಾಧಿಕಾರಿಗಳು ತಿಳಿಸಿದ್ದಾರೆ.

Facebook Comments