ಮಲೆ ಮಹದೇಶ್ವರ ಬೆಟ್ಟಕ್ಕೆ ತೆರಳುತ್ತಿದ್ದ ವ್ಯಕ್ತಿಯನ್ನು ತುಳಿದು ಕೊಂದ ಆನೆ..!

ಈ ಸುದ್ದಿಯನ್ನು ಶೇರ್ ಮಾಡಿ

ಕೊಳ್ಳೇಗಾಲ, ಜು.10-ತಾಲ್ಲೋಕಿನ ಸುಪ್ರಸಿದ್ಧ ಧಾಮಿ9ಕ ಸ್ಥಳ ಮಲೆ ಮಹದೇಶ್ವರ ಬೆಟ್ಟಕ್ಕೆ ತೆರಳುತ್ತಿದ್ದ ವ್ಯಕ್ತಿಯೋವ9 ಆನೆ ತುಳಿತದಿಂದ ಮೃತ ಪಟ್ಟಿರುವ ಘಟನೆ ಪೊನ್ನಾಚಿಗೆ ತೆರಳುವ ಕ್ರಾಸ್ ಬಳಿ ನೆಡೆದಿದೆ.

ಮಂಡ್ಯ ಜಿಲ್ಲೆ ಮಳವಳ್ಳಿ ಪಟ್ಟಣದ ಬಾಬು (30) ಎಂಬಾತನೇ ಮೃತ ಆನೆ ದಾಳಿಯಿಂದ ಪಟ್ಟಿದ್ದು ಈತ ಮಲೆ ಮಹದೇಶ್ವರ ಬೆಟ್ಟದಲ್ಲಿ ಹಣ್ಣು ಮಾರಿಕೊಂಡು ಜೀವನ ಸಾಗಿಸುತ್ತಿದ್ದ.

ಇಂದು ಬೆಳಿಗ್ಗೆ ತಾಳು ಬೆಟ್ಟದಿಂದ ಮಲೆ ಮಹದೇಶ್ವರ ಬೆಟ್ಟಕ್ಕೆ ನಡೆದು ಕೊಂಡು ಹೋಗುತ್ತಿದ್ದ ವೇಳೆ ಮುಖ್ಯ ರಸ್ತೆಯಿಂದ ಪೊನ್ನಾಚಿಗೆ ತೆರಳುವ ಕ್ರಾಸ್ ಬಳಿ ಆನೆಯೊಂದು ದಾಳಿ ನಡೆಸಿದೆ ಘಟನೆಯಿಂದ ಆತನ ತಲೆಗೆ ತೀವ್ರವಾಗಿ ಪೆಟ್ಟು ಬಿದ್ದು ಗಂಭೀರವಾಗಿ ಗಾಯಗೊಂಡು ಮೃತ ಪಟ್ಟಿದ್ದಾನೆ.

ವಿಷಯ ತಿಳಿದ ಮಲೆ ಮಹದೇಶ್ವರ ಬೆಟ್ಟ ಸಿ.ಪಿ.ಐ ಮಹೇಶ್ ಹಾಗೂ ಸಿಬ್ಬಂದಿ ಅರಣ್ಯ ಇಲಾಖೆ ಆರ್.ಎಫ್.ಓ ಗುರುರಾಜು ಹಾಗೂ ಸಿಬ್ಬoದಿ  ಸ್ಥಳಕ್ಕಾಗಮಿಸಿ ಪಟಾಕಿ ಸಿಡಿಸಿ ಆನೆಯನ್ನು ಓಡಿಸಿ ಶವವನ್ನು ಮಲೆ ಮಹದೇಶ್ವರ ಬೆಟ್ಟ ಆಸ್ಪತ್ರೆಯ ಶವಗಾರಕ್ಕೆ ಸಾಗಿಸಿದ್ದಾರೆ.

ಈ ಸಂಬಂಧ ವನಪಾಲಕ ಪರಶುರಾಮ್ ಭಜಂತ್ರಿ ನೀಡಿದ ದೂರಿನ ಮೇರೆಗೆ ಮಲೆ ಮಹದೇಶ್ವರ ಬೆಟ್ಟ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Facebook Comments

( ಎಚ್ಚರಿಕೆ..! : ಈ ಸಂಜೆ ಸುದ್ದಿಗಳನ್ನು ನಕಲು ಮಾಡುವವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗುತ್ತಿದೆ ) > #ವಾಟ್ಸಾಪ್‌ನಲ್ಲಿ ಸುದ್ದಿಗಳನ್ನು ಪಡೆಯಲು 7795582478 ಸಂಖ್ಯೆಯನ್ನು ನಿಮ್ಮ ಮೊಬೈಲ್ ನಲ್ಲಿ SAVE ಮಾಡಿಕೊಂಡು HI EESANJE ಎಂದು ಸಂದೇಶ ಕಳಿಸಿ

Sri Raghav

Admin