ದಸರಾ ಮಹೋತ್ಸವದ ಗಜ ಪಡೆಗೆ ಶೆಡ್ ನಿರ್ಮಾಣ

ಈ ಸುದ್ದಿಯನ್ನು ಶೇರ್ ಮಾಡಿ

eliphant-shad
ಮೈಸೂರು, ಆ.22- ವಿಶ್ವವಿಖ್ಯಾತ ದಸರಾ ಮಹೋತ್ಸವದಲ್ಲಿ ಪಾಲ್ಗೊಳ್ಳುವ ಗಜಪಡೆಗಳಿಗೆ ಅರಮನೆ ಆವರಣದಲ್ಲಿ ಶೆಡ್ ನಿರ್ಮಾಣ ಕಾರ್ಯ ಭರದಿಂದ ಸಾಗಿದೆ.  ಮೊದಲ ಹಂತದಲ್ಲಿ ಕ್ಯಾಪ್ಟನ್ ಅರ್ಜುನ ನೇತೃತ್ವದಲ್ಲಿ ಆರು ಆನೆಗಳು ಹಾಗೂ ಎರಡನೆ ಹಂತದಲ್ಲಿ ಉಳಿದ ಆನೆಗಳನ್ನು ನಗರಕಕೆ ಕರೆತರಲಾಗುತ್ತದೆ. ಆನೆಗಳೊಂದಿಗೆ ಬರುವ ಮಾವುತರು, ಕಾವಾಡಿಗಳು ಹಾಗೂ ಅವರ ಕುಟುಂಬ ವರ್ಗದವರಿಗಾಗಿ ಶೆಡ್ ನಿರ್ಮಿಸಲಾಗುತ್ತಿದೆ. ಕುಡಿಯುವ ನೀರು, ಶೌಚಾಲಯ, ವಿದ್ಯುತ್ ದೀಪ ಮತ್ತಿತರ ಮೂಲಭೂತ ಸೌಕರ್ಯಗಳನ್ನು ಮಾಡಲಾಗುತ್ತಿದೆ. ಮಕ್ಕಳಿಗಾಗಿ ಟೆಂಟ್ ಶಾಲೆ ಹಾಗೂ ಆರೋಗ್ಯ ತಪಾಸಣಾ ಕೇಂದ್ರವನ್ನು ತೆರೆಯಲಾಗುತ್ತಿದೆ. ಆನೆಗಳಿಗೆ ಪ್ರತ್ಯೇಕ ಪೌಷ್ಠಿಕ ಆಹಾರ ಸಿದ್ಧಪಡಿಸಲು ಅಡುಗೆ ಮನೆಯನ್ನು ನಿರ್ಮಿಸಲಾಗುತ್ತಿದೆ.

Facebook Comments

Sri Raghav

Admin