ರೈತರ ಜಮೀನುಗಳಿಗೆ ನುಗ್ಗಿದ ಆನೆಗಳ ಹಿಂಡು: ಬೆಳೆ ನಾಶ

ಈ ಸುದ್ದಿಯನ್ನು ಶೇರ್ ಮಾಡಿ

ಕೋಲಾರ,ಏ.28- ಡಿ.ಎನ್.ದೊಡ್ಡಿ ಗ್ರಾಮದಲ್ಲಿ ಆನೆಗಳ ಹಿಂಡು ಪ್ರತ್ಯಕ್ಷವಾಗಿದ್ದು ಲಕ್ಷಾಂತರ ರೂ. ಮೌಲ್ಯದ ಬೆಳೆ ನಾಶಗೊಳಿಸಿರುವ ಘಟನೆ ನಡೆದಿದೆ.
ಮಾಲೂರು ತಾಲ್ಲೂಕಿನ ಡಿ.ಎನ್.ದೊಡ್ಡಿ ಗ್ರಾಮದಲ್ಲಿ ಕಳೆದೆರಡು ದಿನಗಳಿಂದ ಆನೆಗಳ ಹಿಂಡು ಬೀಡುಬಿಟ್ಟಿದ್ದು,ರೈತರು ಬೆಳೆದ ಬೆಳೆಗಳನ್ನು ನಾಶಗೊಳಿಸಿದ್ದು, ಅಪಾರ ನಷ್ಟ ಸಂಭವಿಸಿದೆ ಎಂದು ರೈತರು ಕಂಗಾಲಾಗಿದ್ದಾರೆ.

ಕಳೆದ ಎರಡು ದಿನಗಳಿಂದ ಆನೆಗಳು ಬೀಡುಬಿಟ್ಟಿದ್ದು, ಈ ಬಗ್ಗೆ ಗ್ರಾಮಸ್ಥರು ಅರಣ್ಯ ಇಲಾಖೆ ಸಿಬ್ಬಂದಿಗೆ ಮಾಹಿತಿ ನೀಡಿದ್ದಾರೆ. ಆದರೆ ಸಿಬ್ಬಂದಿಗಳು ಯಾವುದೇ ರೀತಿಯ ಕ್ರಮ ಕೈಗೊಳ್ಳದೆ ಇರುವುದರಿಂದ ಗ್ರಾಮಸ್ಥರು ಆಕ್ರೋಶಗೊಂಡಿದ್ದಾರೆ.

Facebook Comments