ಜೂನ್‍ 4 ಕ್ಕೆ ಸರ್ಕಾರಿ ನೌಕರರ ಮುಷ್ಕರ

ಈ ಸುದ್ದಿಯನ್ನು ಶೇರ್ ಮಾಡಿ

ಬೆಂಗಳೂರು, ಜೂ.2- ರಾಜ್ಯ ಸರ್ಕಾರಿ ನೌಕರರು ಮತ್ತು ಪಿಂಚಣಿದಾರರಿಗೆ ಮುಂಬರುವ 2021 ಜೂನ್‍ವರೆಗೂ ತುಟ್ಟಿಭತ್ಯೆ ಹೆಚ್ಚಳ ಸಹಿತ ಹಾಗೂ ಇಲಾಖೆಗಳ ವಿಲೀನ ಹೆಸರಿನಲ್ಲಿ ಸಾವಿರಾರು ಹುದ್ದೆಗಳನ್ನು ಕಡಿತಗೊಳಿಸುತ್ತಿರುವ ನಿರ್ಧಾರವನ್ನು ವಿರೋಧಿಸಿ ಜೂ.4ರಂದು ಮುಷ್ಕರಕ್ಕೆ ಕರೆ ನೀಡಲಾಗಿದೆ.

ರಾಜ್ಯದ ಎಲ್ಲೆಡೆ ಸರ್ಕಾರಿ ನೌಕರರು ಕಪ್ಪು ಪಟ್ಟಿ ಧರಿಸಿ ಮುಷ್ಕರ ನಡೆಸಲಿದ್ದಾರೆ ಎಂದು ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಒಕ್ಕೂಟದ ಅಧ್ಯಕ್ಷ ಮಹದೇವಯ್ಯ ಮಠಪತಿ, ಪ್ರಧಾನ ಕಾರ್ಯದರ್ಶಿ ಜೈಕುಮಾರ್ ತಿಳಿಸಿದ್ದಾರೆ.

ಕೊರೊನಾ ನಿಯಂತ್ರಣದಲ್ಲಿ ಮುಂಚೂಣಿಯಲ್ಲಿ ನಿಂತು ಸರ್ಕಾರಿ ನೌಕರರು, ಗುತ್ತಿಗೆ ನೌಕರರು ಹಾಗೂ ದಿನಗೂಲಿ ನೌಕರರು ಕೆಲಸ ಮಾಡುತ್ತಿದ್ದರೂ ಅವರಿಗೆ ಸೂಕ್ತ ರಕ್ಷಣೆ ಇಲ್ಲ. ಹಲವೆಡೆ ಹಲ್ಲೆಗಳು ನಡೆಯುತ್ತಿವೆ. ಇದರ ಬಗ್ಗೆ ಸರ್ಕಾರ ಗಮನ ಹರಿಸುತ್ತಿಲ್ಲ. ಬದಲಾಗಿ ನೌಕರರ ಹಕ್ಕನ್ನು ಕಸಿಯಲಾಗುತ್ತಿದೆ ಎಂದು ದೂರಿದ್ದಾರೆ.

Facebook Comments