ಸ್ಕಿಲ್ ಇಂಡಿಯಾ ಯೋಜನೆಯಡಿ ಯುವಕರಿಗೆ ಉದ್ಯೋಗಾವಕಾಶ : ಸಚಿವ ಗೋಪಾಲಯ್ಯ

ಈ ಸುದ್ದಿಯನ್ನು ಶೇರ್ ಮಾಡಿ

ಬೆಂಗಳೂರು,ಜು.15-ಗ್ರಾಮೀಣ ಪ್ರದೇಶದ ಯುವಕ ಯುವತಿಯರಿಗೆ ಸ್ಕಿಲ್ ಇಂಡಿಯಾ ಯೋಜನೆಯಡಿ ವಿವಿಧ ಬಗೆಯ ಕಂಪನಿಗಳಲ್ಲಿ ಉದ್ಯೋಗಾವಕಾಶಗಳು ಒದಗಿಸಿಕೊಡುವ ನಿಟ್ಟಿನಲ್ಲಿ ಅನೇಕ ಕಾರ್ಯಕ್ರಮಗಳನ್ನು ರೂಪಿಸಲಾಗಿದ್ದು ಯುವಕರು ಇದರ ಪ್ರಯೋಜನ ಪಡೆದುಕೊಳ್ಳಬಹುದು ಎಂದು ಸಚಿವ ಗೋಪಾಲಯ್ಯ ಹೇಳಿದರು.

ಇಂದು ತಮ್ಮ ಕ್ಷೇತ್ರದಲ್ಲಿ ನಡೆದ ಸಮಾರಂಭದಲ್ಲಿ ಪಾಲ್ಗೊಂಡು ಸ್ಕಿಲ್ ಇಂಡಿಯಾ ಯೋಜನೆಯಡಿ ಸ್ಕಿಲ್ಸ್ ಅಂಡ್ ವೀಲ್ಸ್ ಎಂಬ ವಾಹನವನ್ನು ಲೋಕಾರ್ಪಣೆ ಮಾಡಿ ಉದ್ಯೋಗ ಪ್ರಮಾಣಪತ್ರ ನೀಡಿ ಮಾತನಾಡಿದ ಅವರು, ಸ್ಕಿಲ್ ಇಂಡಿಯಾ ಕಾರ್ಯಕ್ರಮವನ್ನು ಪ್ರಧಾನಿ ನರೇಂದ್ರ ಮೋದಿಯವರು 2015 ಜುಲೈ 15ರಂದು ಜಾರಿಗೆ ತಂದರು.

ಭಾರತದ ಯುವ ಪ್ರತಿಭೆಗಳಿಗೆ ದುಡಿಯುವ ಅವಕಾಶ ಹಾಗೂ ತರಬೇತಿ ನೀಡುವುದಕ್ಕಾಗಿ ಅನುಷ್ಠಾನಕ್ಕೆ ತರುವಲ್ಲಿ ಯಶಸ್ವಿಯಾಗಿದ್ದಾರೆ. ಇದರಿಂದ ಸಾಕಷ್ಟು ಯುವ ಪ್ರತಿಭೆಗಳಿಗೆ ಅನುಕೂಲವಾಗಿದೆ.

ನಮ್ಮ ರಾಜ್ಯದಲ್ಲಿ ಯಡಿಯೂರಪ್ಪ ನೇತೃತ್ವದ ಸರ್ಕಾರ ಯುವಕರನ್ನು ಸ್ವಾವಲಂಬಿಗಳನ್ನಾಗಿ ಮಾಡಿ ಈ ಯೋಜನೆಯ ಮೂಲಕ ಬದುಕಲು ಅವಕಾಶ ಕಲ್ಪಿಸಿಕೊಟ್ಟಿದೆ ಎಂದರು.

ಸ್ಕಿಲ್ ಇಂಡಿಯಾ ಯೋಜನೆಗಳಲ್ಲಿ ಪ್ರತಿಭೆಗಳನ್ನು ಹೊರತೆಗೆದು ವಿವಿಧ ಕಂಪನಿಗಳು, ಉದ್ಯೋಗದಾತರು, ಯುವಕರಿಗೆ ಅವಕಾಶವನ್ನು ಕಲ್ಪಿಸಿಕೊಡುತ್ತಿವೆ. ಇದರ ಸದುಪಯೋಗಪಡಿಸಿಕೊಳ್ಳಬೇಕೆಂದು ಅವರು ತಿಳಿಸಿದರು.

ಸಮಾರಂಭದಲ್ಲಿ ಮುಖಂಡರಾದ ಜಯರಾಮಯ್ಯ, ಎಂ.ಮಹದೇವ್, ರಾಜೇಂದ್ರ ಕುಮಾರ್ ಸೇರಿದಂತೆ ಹಲವು ಮುಖಂಡರು ಉಪಸ್ಥಿತರಿದ್ದರು.

Facebook Comments

Sri Raghav

Admin