ಸೇನೆ ನಡೆಸಿದ ಎನ್‌ಕೌಂಟರ್‌ನಲ್ಲಿ 3 ಜೈಷ್ ಉಗ್ರರು ಖತಂ..!

ಈ ಸುದ್ದಿಯನ್ನು ಶೇರ್ ಮಾಡಿ

ಶ್ರೀನಗರ, ಅ.23-ಜಮ್ಮು ಮತ್ತು ಕಾಶ್ಮೀರದಲ್ಲಿ ಉಗ್ರರ ನಿಗ್ರಹ ಕಾರ್ಯಾಚರಣೆಯನ್ನು ಯೋಧರು ಮತ್ತಷ್ಟು ತೀವ್ರಗೊಳಿಸಿದ್ದು, ಇನ್ನೂ ಮೂವರು ಭಯೋತ್ಪಾದಕರನ್ನು ಹೊಡೆದುರುಳಿಸಿದ್ದಾರೆ. ದಕ್ಷಿಣ ಕಾಶ್ಮೀರದ ತ್ರಾಲ್ ಪ್ರದೇಶದಲ್ಲಿ ಭಾರತೀಯ ಸೇನಾಪಡೆ ಎನ್‍ಕೌಂಟರ್ ನಡೆಸಿದ್ದು, ಪಾಕಿಸ್ತಾನ ಮೂಲದ ಜೈಷ್-ಇ-ಮೊಹಮ್ಮದ್(ಜೆಎಎಂ) ಉಗ್ರ ಸಂಘಟನೆಗೆ ಸೇರಿದ ಮೂವರು ಉಗ್ರರನ್ನು ಹತ್ಯೆ ಮಾಡಿದೆ.

ಹತ್ಯೆಯಾಗಿರುವ ಮೂವರು ಉಗ್ರರ ಪೈಕಿ ಇಬ್ಬರು ಉಗ್ರರು ಪಾಕಿಸ್ತಾನದ ಭಯೋತ್ಪಾದಕರಾಗಿದ್ದಾರೆ ಎಂದು ಜಮ್ಮು ಮತ್ತು ಕಾಶ್ಮೀರದ ಪೊಲೀಸ್ ಆಯುಕ್ತ ದಿಲ್ಬಾಗ್ ಸಿಂಗ್ ಹೇಳಿದ್ದಾರೆ. ತ್ರಾಲ್‍ನಲ್ಲಿ ಉಗ್ರರು ಅಡಗಿ ಕುಳಿತಿರುವ ಮಾಹಿತಿ ತಿಳಿಯುತ್ತಿದ್ದಂತೆಯೇ ಭಾರತೀಯ ಸೇನೆ ಕಾರ್ಯಾಚರಣೆಗಿಳಿದಿದೆ.

ಈ ವೇಳೆ ಉಗ್ರರು ಸೇನೆ ಮೇಲೆ ಏಕಾಏಕಿ ಗುಂಡಿನ ದಾಳಿ ನಡೆಸಿದ್ದಾರೆ. ಕೂಡಲೇ ಕಾರ್ಯಾಚರಣೆಯನ್ನು ಎನ್‍ಕೌಂಟರ್ ಆಗಿ ಪರಿವರ್ತಿಸಿ ದಿಟ್ಟ ಉತ್ತರ ನೀಡುವ ಮೂಲಕ ಮೂರು ಉಗ್ರರನ್ನು ಹತ್ಯೆ ಮಾಡುವಲ್ಲಿ ಸೇನೆ ಯಶಸ್ವಿಯಾಗಿದೆ.

Facebook Comments