ಕಾಶ್ಮೀರದಲ್ಲಿ ಮತ್ತಿಬ್ಬರು ಉಗ್ರರು ಫಿನಿಷ್

ಈ ಸುದ್ದಿಯನ್ನು ಶೇರ್ ಮಾಡಿ

ಗೋಪಾಲಪೊರ, ಮೇ 22- ಕಾಶ್ಮೀರ ಕಣಿವೆಯಲ್ಲಿ ಉಗ್ರರ ನಿಗ್ರಹ ಕಾರ್ಯಾಚರಣೆಯನ್ನು ಮತ್ತಷ್ಟು ಬಿರುಸುಗೊಳಿಸಿರುವ ಭಾರತೀಯ ಭದ್ರತಾ ಪಡೆಗೆ ಭಯೋತ್ಪಾದಕರು ಹತರಾಗುತ್ತಲೇ ಇದ್ದಾರೆ.

ಜಮ್ಮು ಮತ್ತು ಕಾಶ್ಮೀರದ ಕುಲ್ಗಾಂ ಜಿಲ್ಲೆಯ ಗೋಪಾಲ್‍ಪೊರ ಪ್ರದಶದಲ್ಲಿ ಇಂದು ಮುಂಜಾನೆ ಯೋಧರೊಂದಿಗೆ ನಡೆದ ಗುಂಡಿನ ಕಾಳಗದಲ್ಲಿ ಮತ್ತಿಬ್ಬರು ಉಗ್ರಗಾಮಿಗಳು ಹತರಾಗಿದ್ದು, ಶಸ್ತ್ರಾಸ್ತ್ರಗಳು ಮತ್ತು ಮದ್ದುಗುಂಡುಗಳನ್ನು ವಶಪಡಿಸಿಕೊಳ್ಲಲಾಗಿದೆ ಎಂದು ಹಿರಿಯ ಸೇನಾಧಿಕಾರಿಯೊಬ್ಬರು ತಿಳಿಸಿದ್ಧಾರೆ.

ಗೋಪಾಲಪೊರ ಗ್ರಾಮದ ನಿರ್ಜದ ಪ್ರದೇಶದಲ್ಲಿ ಉಗ್ರರು ಅಡಗಿ ಕುಳಿತ್ತಿದ್ದು, ದಾಳಿಗೆ ಸಂಚು ರೂಪಿಸಿದ್ದಾರೆ ಎಂಬ ಖಚಿತ ಮಾಹಿತಿ ಮೇರೆಗೆ ನಿನ್ನೆ ಮಧ್ಯರಾತ್ರಿಯಿಂದಲೇ ಸೇನೆಯ 34 ಆರ್‍ಆರ್ ಮತ್ತ ಎಸ್‍ಒಜಿ ಜಂಟಿ ತಂಡದ ಯೋಧರು ಆ ಪ್ರದೇಶವನ್ನು ಸುತ್ತುವರಿದರು. ಇಂದು ಮಂಜಾಜೆ ತಮ್ಮ ಸನಿಹಕ್ಕೆ ಬರುತ್ತಿದ್ದ ಯೋದರ ಮೇಲೆ ಉಗ್ರರು ಗುಂಡು ಹಾರಿಸಿದರು.

ಈ ಸಂದರ್ಭದಲ್ಲಿ ನಡೆದ ಗುಂಡಿನ ಕಾಳಗದಲ್ಲಿ ಇಬ್ಬರು ಆತಂಕವಾದಿಗಳು ಹತರಾದರು ಇವರು ಹಿಬ್‍ಬುಲ್ ಮುಜಾಹಿದ್ದ್ಧೀನ್(ಎಚ್‍ಎಂ) ಭಯೋತ್ಪಾದಕ ಸಂಘಟನೆಗೆ ಸೇರಿದ ಉಗರರೆಂದು ಉನ್ನತ ಪೊಲೀಸ್ ಆಧಿಕಾರಿಯೊಬ್ಬರು ಮಾಹಿತಿ ನೀಡಿದ್ದಾರೆ.

ಗುಂಡಿನ ಚಕಮಕಿ ಸಂದರ್ಭದಲ್ಲಿ ಪರಾರಿಯಾಗಿರಬಹುದಾದ ಇತರ ಉಗ್ರಗಾಮಿಗಳಿಗೆ ಯೋಧರು ತೀವ್ರ ಶೋಧ ಮುಂದುವರಿಸಿದ್ದಾರೆ. ಕಳೆದ ಕೆಲವು ದಿನಗಳಿಂದ ಕಾಶ್ಮೀರ ಕಣಿವೆಯ ಪುಲ್ವಾಮಾ, ಶೋಪಿಯಾನ್ ಮತ್ತು ಕುಲ್ಗಾಂ ಜಿಲ್ಲೆಗಳಲ್ಲಿ ಯೋಧರು ಭಯೋತ್ಪಾದಕರನ್ನು ಹೊಡೆದುರುಳಿಸಿ ಶಸ್ತ್ರಾಸ್ತ್ರಗಳು, ಸ್ಪೋಟಕಗಳು ಮತ್ತು ಮದ್ದುಗುಂಡುಗಳನ್ನು ವಶಪಡಿಸಿಕೊಳ್ಳುತ್ತಿದ್ದಾರೆ.

Facebook Comments

( ಎಚ್ಚರಿಕೆ..! : ಈ ಸಂಜೆ ಸುದ್ದಿಗಳನ್ನು ನಕಲು ಮಾಡುವವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗುತ್ತಿದೆ ) > #ವಾಟ್ಸಾಪ್‌ನಲ್ಲಿ ಸುದ್ದಿಗಳನ್ನು ಪಡೆಯಲು 7795582478 ಸಂಖ್ಯೆಯನ್ನು ನಿಮ್ಮ ಮೊಬೈಲ್ ನಲ್ಲಿ SAVE ಮಾಡಿಕೊಂಡು HI EESANJE ಎಂದು ಸಂದೇಶ ಕಳಿಸಿ

Sri Raghav

Admin