ಗುಡ್ಡ ಕುಸಿದು ಹಾಸನದಲ್ಲೇ ನಿಂತ ಕಾರವಾರಕ್ಕೆ ಹೊರಟಿದ್ದ ರೈಲು

ಈ ಸುದ್ದಿಯನ್ನು ಶೇರ್ ಮಾಡಿ

Train--01

ಹಾಸನ. ಆ. 09 : ಸಕಲೇಶಪುರ ತಾಲೂಕಿನಾದ್ಯಂತ ಸುರಿಯುತ್ತಿರುವ ಬಾರಿ ಮಳೆಗೆ ಪಶ್ಚಿಮ ಘಟ್ಟದಲ್ಲಿರುವ ಯಡಕುಮರಿ ಬಳಿ ಮತ್ತೆ ಗುಡ್ಡ ಕುಸಿದಿದ್ದು, ರೈಲು ಸಂಚಾರಕ್ಕೆ ತಡೆಯುಂಟಾಗಿದೆ. ಗುಡ್ಡ ಕುಸಿತದಿಂದಾಗಿ ಕಾರವಾರಕ್ಕೆ ಹೊರಟಿದ್ದ ರೈಲು ಹಾಸನದಲ್ಲೇ ಸ್ಥಗಿತಗೊಂಡಿದ್ದು, ಬೆಂಗಳೂರು-ಮಂಗಳೂರು ರೈಲು ಸಂಚಾರ ಸಂಪೂರ್ಣ ಸ್ಥಗಿತಗೊಂಡಿದೆ. ರೈಲು ಸಂಚಾರ ಸ್ಥಗಿತಗೊಂಡಿರುವುದರಿಂದ ಪ್ರಯಾಣಿಕರು ಹಾಸನದಿಂದ ಬಸ್‌ ಮೂಲಕ ಸಂಚರಿಸುತ್ತಿದ್ದಾರೆ. ಇದುವರೆಗೂ 4ನೇ ಬಾರಿ ಹಳಿ ಮೇಲೆ ಗುಡ್ಡ ಕುಸಿದಿದ್ದು, ಬೆಂಗಳೂರು-ಮಂಗಳೂರು ರೈಲ್ವೆ ಪ್ರಯಾಣ ಮಳೆಗಾಲ ಕಳೆಯುವ ತನಕ ಆಯಾಸ ಎನಿಸಿದೆ.

# ಮಂಗಳೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿ ಸಂಪರ್ಕ ಕಡಿತ :
ಪಶ್ಚಿಮ ಘಟ್ಟದಲ್ಲಿ ಸುರಿಯುತ್ತಿರುವ ಭಾರಿ ಮಳೆಯಿಂದಾಗಿ ಮಂಗಳೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿ ಸಂಪರ್ಕ ಕಡಿತಗೊಂಡಿದೆ. ಪುತ್ತೂರು ತಾಲೂಕಿನ ಗುಂಡ್ಯಾ ಸಮೀಪದ ರಾಷ್ಟ್ರೀಯ ಹೆದ್ದಾರಿ 75 ರಲ್ಲಿ ಉದನೆ ಪ್ರದೇಶದಲ್ಲಿ ಮಳೆಯಿಂದಾಗಿ ರಸ್ತೆಯಲ್ಲಿ ನದಿ ನೀರು ಹರಿಯುತ್ತಿದೆ. ಇದರಿಂದ ಹೆದ್ದಾರಿಯಲ್ಲಿ ಕಿಲೋಮೀಟರ್ ಗಟ್ಟಲೆ ವಾಹನಗಳು ಸಾಲುಗಟ್ಟಿ ನಿಂತಿವೆ. ನೀರು ಕಡಿಮೆಯಾಗುವ ತನಕ ಸಂಚಾರ ನಿರ್ಬಂಧವಾಗಿದೆ. ಮುಂಜಾಗೃತ ಕ್ರಮವಾಗಿ ಸ್ಥಳಕ್ಕೆ ಅಗ್ನಿಶಾಮಕ ದಳ ಮತ್ತು ಪೊಲೀಸರು ಬಂಧಿದ್ದಾರೆ.  ಭಾರಿ ಮಳೆಯಿಂದಾಗಿ ಕರಾವಳಿಯ ನದಿ ಮತ್ತು ಹೊಳೆಗಳು ಅಪಾಯದ ಮಟ್ಟ ಮೀರಿ ಹರಿಯುತ್ತಿವೆ.

# ಕೊಡಗಲ್ಲಿ ಜನಜೀವನ ಅಸ್ತವ್ಯಸ್ತ:
ಕೊಡಗಿನಲ್ಲಿ ಮಂಗಳವಾರ ರಾತ್ರಿಯಿಂದ ಭರ್ಜರಿ ಮಳೆ ಬಿದ್ದ ಪರಿಣಾಮ ಜನಜೀವನ ಅಸ್ತವ್ಯಸ್ತವಾಗಿದೆ. ನದಿ, ತೊರೆಗಳು ಉಕ್ಕಿ ಹರಿಯುತ್ತಿವೆ. ನಾಪೋಕ್ಲು ಸಮೀಪದ ಕಕ್ಕಬ್ಬೆಯಲ್ಲಿ ಬಸ್ ನೀರಿನಲ್ಲಿ ಜಲಾವೃತಗೊಂಡಿತ್ತು. ಮಡಿಕೇರಿ ತಾಲೂಕಿನ ಭಾಗಮಂಡಲದ ತ್ರಿವೇಣಿ ಸಂಗಮದಲ್ಲಿ ರಸ್ತೆಗಳು ಜಲಾವೃತಗೊಂಡಿವೆ. ಭಾಗಮಂಡಲ- ನಾಪೋಕ್ಲು ರಸ್ತೆಯ ಮೇಲೆ ನೀರು ಹರಿಯುತ್ತಿದ್ದು, ಸಂಚಾರ ನಿಷೇಧಿಸಲಾಗಿದೆ.

Facebook Comments

( ಎಚ್ಚರಿಕೆ..! : ಈ ಸಂಜೆ ಸುದ್ದಿಗಳನ್ನು ನಕಲು ಮಾಡುವವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗುತ್ತಿದೆ ) > #ವಾಟ್ಸಾಪ್‌ನಲ್ಲಿ ಸುದ್ದಿಗಳನ್ನು ಪಡೆಯಲು 7795582478 ಸಂಖ್ಯೆಯನ್ನು ನಿಮ್ಮ ಮೊಬೈಲ್ ನಲ್ಲಿ SAVE ಮಾಡಿಕೊಂಡು HI EESANJE ಎಂದು ಸಂದೇಶ ಕಳಿಸಿ

Sri Raghav

Admin