ಇಂದು ಇಂಜಿನಿಯರ್‌ಗಳ ದಿನಾಚರಣೆ : ಸರ್.ಎಂ.ವಿ ಸಾಧನೆ ಸ್ಮರಿಸಿದ ಪ್ರಧಾನಿ

ಈ ಸುದ್ದಿಯನ್ನು ಶೇರ್ ಮಾಡಿ

ನವದೆಹಲಿ, ಸೆ.15-ಭಾರತರತ್ನ ಸರ್.ಎಂ.ವಿಶ್ವೇಶ್ವರಯ್ಯನವರ ಜನ್ಮದಿನವಿಂದು ಅವರ ಹುಟ್ಟುಹಬ್ಬವನ್ನು ದೇಶಾದ್ಯಂತ ಎಂಜಿನಿಯರ್‍ಗಳ ದಿನವನ್ನಾಗಿ ಆಚರಿಸಲಾಗುತ್ತದೆ.
ಇಂಜಿನಿಯರ್‌ಗಳ ದಿನಾಚರಣೆ ಸಂದರ್ಭದಲ್ಲಿ ರಾಷ್ಟ್ರಪತಿ ರಾಮನಾಥ್ ಕೋವಿಂದ್, ಉಪರಾಷ್ಟ್ರಪತಿ ವೆಂಕಯ್ಯನಾಯ್ಡು ಮತ್ತು ಪ್ರಧಾನಮಂತ್ರಿ ನರೇಂದ್ರ ಮೋದಿ ಸೇರಿದಂತೆ ಅನೇಕ ಗಣ್ಯಾತಿಗಣ್ಯರು ದೇಶದ ಇಂಜಿನಿಯರ್‌ಗಳ ಸೇವೆ ಮತ್ತು ಶ್ರಮವನ್ನು ಕೊಂಡಾಡಿದ್ದಾರೆ.

ಈ ಕುರಿತು ಟ್ವೀಟ್ ಮಾಡಿರುವ ಪ್ರಧಾನಿ ನರೇಂದ್ರ ಮೋದಿ ಇಂದು ಇಂಜಿನಿಯರ್‌ಗಳ ದಿನ. ದೇಶದ ನಿರ್ಮಾಣಕ್ಕೆ ಅಮೂಲ್ಯ ಕೊಡುಗೆ ನೀಡಿರುವ ಸರ್.ಎಂ.ವಿ ಅವರ ಜನ್ಮದಿನವನ್ನು ಇಂಜಿನಿಯರ್‌ ದಿನವನ್ನಾಗಿ ಆಚರಿಸಲಾಗುತ್ತದೆ. ಈ ಸಂದರ್ಭದಲ್ಲಿ ಎಲ್ಲಾ ಇಂಜಿನಿಯರ್‌ಗಳು ಮತ್ತು ತಂತ್ರಶಿಲ್ಪಿಗಳಿಗೆ ನಾನು ಶುಭಾಶಯ ಕೋರುತ್ತೇನೆ ಎಂದು ಹೇಳಿದ್ದಾರೆ.

 

ಸರ್.ಎಂ.ವಿಶ್ವೇಶ್ವರಯ್ಯನವರು ಡ್ಯಾಂಗಳನ್ನು ನಿರ್ಮಾಣ ಮಾಡುವ ಮೂಲಕ ಅಮೂಲ್ಯ ಜಲಸಂಪನ್ಮೂಲ ರಕ್ಷಣೆಗೆ ಮಹತ್ವದ ಕೊಡುಗೆ ನೀಡಿದ್ದಾರೆ. ಅವರ ನೈಪುಣ್ಯತೆ ಮತ್ತು ಕಾರ್ಯದಕ್ಷತೆ ನಮ್ಮ ಎಂಜಿನಿಯರ್‍ಗಳಿಗೆ ಮಾದರಿಯಾಗಿದೆ ಎಂದು ಉಪರಾಷ್ಟ್ರಪತಿ ವೆಂಕಯ್ಯನಾಯ್ಡು ಟ್ವೀಟರ್‍ನಲ್ಲಿ ಶ್ಲಾಘಿಸಿದ್ದಾರೆ.

Facebook Comments

( ಎಚ್ಚರಿಕೆ..! : ಈ ಸಂಜೆ ಸುದ್ದಿಗಳನ್ನು ನಕಲು ಮಾಡುವವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗುತ್ತಿದೆ ) > #ವಾಟ್ಸಾಪ್‌ನಲ್ಲಿ ಸುದ್ದಿಗಳನ್ನು ಪಡೆಯಲು 7795582478 ಸಂಖ್ಯೆಯನ್ನು ನಿಮ್ಮ ಮೊಬೈಲ್ ನಲ್ಲಿ SAVE ಮಾಡಿಕೊಂಡು HI EESANJE ಎಂದು ಸಂದೇಶ ಕಳಿಸಿ