ಇಪಿಎಫ್‌ಒನಲ್ಲಿ 2189 ಪದವೀಧರರ ನೇಮಕಾತಿಗೆ ಅರ್ಜಿ ಅಹ್ವಾನ

ಈ ಸುದ್ದಿಯನ್ನು ಶೇರ್ ಮಾಡಿ

ನೌಕರರ ಭವಿಷ್ಯ ನಿಧಿ ಸಂಸ್ಥೆಯಲ್ಲಿ (ಇಪಿಎಫ್‌ಒ) ನೇಮಕಾತಿ 2019 ಪ್ರಕಟಣೆ ಬಿಡುಗಡೆ ಮಾಡಿದ್ದು ಸಾಮಾಜಿಕ ಭದ್ರತಾ ಸಹಾಯಕ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಈ ಹುದ್ದೆಗಳಿಗೆ ಸೇರ ಬಯಸುವ ಆಸಕ್ತ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು. 27 ಜೂನ್ ನಿಂದ 21 ಜುಲೈ 2019 ರವರೆಗೆ ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಬಹುದು.

ನೌಕರರ ಭವಿಷ್ಯ ನಿಧಿ ಸಂಸ್ಥೆಯಲ್ಲಿ (ಇಪಿಎಫ್‌ಒ) ಯಲ್ಲಿ ಖಾಲಿ ಇರುವ 2189 ಸಾಮಾಜಿಕ ಭದ್ರತಾ ಸಹಾಯಕ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಮಾನ್ಯತೆ ಪಡೆದ ಸಂಸ್ಥೆಯಿಂದ ಸ್ನಾತಕೋತ್ತರ ಪದವಿ ಹೊಂದಿರಬೇಕು. ಅಥವಾ ಸಮಾನತೆಯ ಪೂರೈಸಿದ ಅರ್ಜಿದಾರರು.  ಈ ಇಪಿಎಫ್‌ಒ ನೇಮಕಾತಿ  ಕನಿಷ್ಠ ಮತ್ತು ಗರಿಷ್ಠ ವಯಸ್ಸಿನ ಮಿತಿ 1 ಜುಲೈ 2019 ರಂತೆ 18 ರಿಂದ 27 ವರ್ಷಗಳು ಆಗಿರಬೇಕು.

ಅರ್ಜಿ ಶುಲ್ಕ: ಎಸ್‌ಸಿ / ಎಸ್‌ಟಿ / ಪಿಡಬ್ಲ್ಯೂಬಿಡಿ / ಸ್ತ್ರೀ / ಮಾಜಿ ಸೈನಿಕರು: ರೂ. 250 / -, ಎಲ್ಲಾ ಇತರರು: ರೂ. 500 / –  ಆಯ್ಕೆ ಪ್ರಾಥಮಿಕ ಪರೀಕ್ಷೆ, ಮುಖ್ಯ ಪರೀಕ್ಷೆ ಮತ್ತು ಕಂಪ್ಯೂಟರ್ ಕೌಶಲ್ಯ ಪರೀಕ್ಷೆಯ ಆಧಾರದ ಮೇಲೆ ಆಯ್ಕೆ ಇರುತ್ತದೆ.

ಹೆಚ್ಚಿನ ಮಾಹಿತಿಗಾಗಿ ಮುಂದಿನ ಲಿಂಕ್ ಭೇಟಿ ನೀಡಿ:  https://www.epfindia.gov.in/site_docs/PDFs/Recruitments_PDFs/Exam_Recruit_SSA_109.pdf

Facebook Comments

( ಎಚ್ಚರಿಕೆ..! : ಈ ಸಂಜೆ ಸುದ್ದಿಗಳನ್ನು ನಕಲು ಮಾಡುವವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗುತ್ತಿದೆ ) > #ವಾಟ್ಸಾಪ್‌ನಲ್ಲಿ ಸುದ್ದಿಗಳನ್ನು ಪಡೆಯಲು 7795582478 ಸಂಖ್ಯೆಯನ್ನು ನಿಮ್ಮ ಮೊಬೈಲ್ ನಲ್ಲಿ SAVE ಮಾಡಿಕೊಂಡು HI EESANJE ಎಂದು ಸಂದೇಶ ಕಳಿಸಿ