ಕೆಪಿಸಿಸಿ ಅಧ್ಯಕ್ಷ ಸ್ಥಾನದ ಬಗ್ಗೆ ಎರಡು ದಿನದಲ್ಲಿ ಸ್ಪಷ್ಟತೆ: ಈಶ್ವರ್ ಖಂಡ್ರೆ

ಈ ಸುದ್ದಿಯನ್ನು ಶೇರ್ ಮಾಡಿ

ಬೆಂಗಳೂರು.ಮಾ.7-ಕೆಪಿಸಿಸಿ ಅಧ್ಯಕ್ಷ ಸ್ಥಾನದ ಬಗ್ಗೆ ಇನ್ನೆರಡು ದಿನಗಳಲ್ಲಿ ಸ್ಪಷ್ಟತೆ ಸಿಗಲಿದೆ  ಹಾಲಿ ಅಧ್ಯಕ್ಷ ದಿನೇಶ್ ಗುಂಡೂರಾವ್ ಅವರು ದೆಹಲಿಯಲ್ಲಿ ರಾಹುಲ್‍ಗಾಂಧಿ ಅವರನ್ನು ಭೇಟಿ ಮಾಡಿದ್ದಾರೆ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಈಶ್ವರ್ ಖಂಡ್ರೆ ತಿಳಿಸಿದರು.ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯದಲ್ಲಿ ಕಾಂಗ್ರೆಸ್ ಅತಂತ್ರ ಪರಿಸ್ಥಿತಿಯಲ್ಲಿದೆ.

ಇದನ್ನು ಬೇಗ ಬಗೆಹರಿಸಬೇಕೆಂದು ನಾವು ಕೂಡ ಒತ್ತಾಯ ಮಾಡಿದ್ದೇವೆ. ದಿನೇಶ್ ಗುಂಡೂರಾವ್ ಅವರನ್ನೇ ಮುಂದುವರೆಸಲಿ ಅಥವಾ ಹೊಸ ಅಧ್ಯಕ್ಷರನ್ನು ನೇಮಿಸಲಿ. ಶ್ರೀಘ್ರ ನೀರ್ಧಾರ ಕೈಗೊಳ್ಳುವಂತೆ ಮನವಿ ಮಾಡಿದ್ದೇವೆ. ಇನ್ನೆರಡು ದಿನಗಳಲ್ಲಿ ಎಲ್ಲವೂ ಬಗೆಹರಿಯಲಿದೆ ಎಂದರು. ರಾಜ್ಯ ಸರ್ಕಾರ ಅನ್ನಭಾಗ್ಯ ಯೋಜನೆಯಲ್ಲಿ ಎರಡು ಕೆಜಿ ಅಕ್ಕಿ ಕಡಿತ ಮಾಡಿರುವುದರನ್ನು ತೀವ್ರವಾಗಿ ಖಂಡಿಸಿದರು.

ಕಾಂಗ್ರೆಸ್ ಮಹತ್ವದ ಯೋಜನೆಯಾದ ಅನ್ನಭಾಗ್ಯಕ್ಕೆ ಕತ್ತರಿ ಹಾಕಲು ಅವಕಾಶ ಕೊಡುವುದಿಲ್ಲ. ಸದನದಲ್ಲಿ ಈ ವಿಷಯವನ್ನು ಪ್ರಸ್ತಾಪ ಮಾಡುತ್ತೇವೆ. ಅಕ್ಕಿಯ ಜಾಗದಲ್ಲಿ ರಾಗಿ, ಜೋಳ ಬೇಕಾದರೆ ಕೊಡಲಿ ಅದನ್ನು ಬಿಟ್ಟು ಆಹಾರ ಪ್ರಮಾಣವನ್ನು ಕಡಿತ ಮಾಡುವುದು ಸರಿಯಲ್ಲ. ರಾಜ್ಯ ಸರ್ಕಾರ ಆರ್ಥಿಕವಾಗಿ ತೊಂದರೆಯಲ್ಲಿದೆ. ಹೀಗಾಗಿ ಒಂದೊಂದೇ ಜನಪರ ಯೋಜನೆಗಳನ್ನು ಕೈಬಿಡುತ್ತಿದೆ. ಈ ಬಗ್ಗೆ ಕಾಂಗ್ರೆಸ್ ಸದನದ ಒಳಗೆ, ಹೊರಗೆ ಹೋರಾಟ ನಡೆಸಲಿದೆ ಎಂದು ಹೇಳಿದರು.

Facebook Comments