ಶೀಘ್ರದಲ್ಲೇ ಬಿಜೆಪಿ ಸರ್ಕಾರ ಪತನ : ಖಂಡ್ರೆ ಭವಿಷ್ಯ

ಈ ಸುದ್ದಿಯನ್ನು ಶೇರ್ ಮಾಡಿ

ತುಮಕೂರು, ಜ.15- ಯಡಿಯೂರಪ್ಪ ಅವರು ಈಗಾ ಗಲೇ ರಾಜೀನಾಮೆಯ ಪ್ರಸ್ತಾಪ ಮಾಡಿದ್ದಾರೆ. ಅವರಿಂದ ಸರ್ಕಾರ ಮುನ್ನೆಡಸಲು ಸಾಧ್ಯವಿಲ್ಲ. ಬಿಜೆಪಿ ಸರ್ಕಾರ ಶೀಘ್ರದಲ್ಲೇ ಪತನ ವಾಗಲಿದೆ. ಮತ್ತೆ ಕಾಂಗ್ರೆಸ್ ಸರ್ಕಾರ ಅಸ್ತಿತ್ವಕ್ಕೆ ಬರಲಿದೆ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಈಶ್ವರ ಖಂಡ್ರೆ ಹೇಳಿದ್ದಾರೆ.

ಸಿದ್ದಗಂಗಾ ಮಠಕ್ಕೆ ಭೇಟಿ ನೀಡಿ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಂಪುಟ ಪುನಾರಚನೆ ಮಾಡಲು ಮುಖ್ಯಮಂತ್ರಿ ಯಡಿಯೂರಪ್ಪ ಅವರ ಕೈಯಲ್ಲಿ ಸಾಧ್ಯವಾಗುತ್ತಿಲ್ಲ.
ನನಗೆ ಅಧಿಕಾರದ ಆಸೆ ಇಲ್ಲ. ರಾಜೀನಾಮೆ ನೀಡುತ್ತೇನೆ ಎಂದು ಈಗಾಗಲೇ ಹೇಳಿದ್ದಾರೆ.

ಮುಂದೆ ಸರ್ಕಾರ ಮುನ್ನೆಡಸಲು ಅವರಿಂದ ಆಗುವುದಿಲ್ಲ. ಇನ್ನು ಕೆಲವೇ ದಿನಗಳು ಮಾತ್ರ ರಾಜ್ಯದಲ್ಲಿ ಬಿಜೆಪಿ ಸರ್ಕಾರ ಇರುತ್ತದೆ ನಂತರ ಮತ್ತೊಮ್ಮೆ ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬರಲಿದೆ ಎಂದು ಹೇಳಿದರು.ನಮ್ಮ ಪಕ್ಷದಲ್ಲಿ ಯಾವುದೇ ಗುಂಪು ಗಾರಿಕೆಯಗಲಿ, ಭಿನ್ನಮತ ವಾಗಲಿ ಇಲ್ಲ. ನಾವೆಲ್ಲರೂ ಒಗ್ಗಟ್ಟಾಗಿದ್ದೇವೆ. ಕಾಂಗ್ರೆಸ್ ಹೈಕಮಾಂಡ್ ಯಾರನ್ನೇ ಕೆಪಿಸಿಸಿಗೆ ಅಧ್ಯಕ್ಷರನ್ನಾಗಿ ನೇಮಿಸಿದರೂ ಎಲ್ಲರೂ ಬೆಂಬಲ ನೀಡುತ್ತಾರೆ ಎಂದು ಹೇಳಿದರು.

ರಾಜ್ಯದ ರಾಜಕೀಯ ಬಗ್ಗೆ ವರಿಷ್ಠರಿಗೆ ಪ್ರತಿಯೊಂದು ಮಾಹಿತಿಯೂ ಇದೆ. ಸಂಕ್ರಾಂತಿ ನಂತರ ನಾಲ್ಕೈದು ದಿನದಲ್ಲಿ ಕೆಪಿಸಿಸಿ ಅಧ್ಯಕ್ಷರನ್ನು ನೇಮಿಸಲಿದ್ದಾರೆ. ವರಿಷ್ಠರ ತೀರ್ಮಾನಕ್ಕೆ ನಾವು ಬದ್ಧರಾಗಿರುತ್ತೇವೆ. ನಾನು ಸಾಮಾನ್ಯ ಕಾರ್ಯಕರ್ತನಾಗಿ ಸೇವೆ ಮಾಡುತ್ತಿದ್ದೇನೆ. ಯಾರಿಗೆ ಅವಕಾಶ ನೀಡಿದರೂ ಬೆಂಬಲ ನೀಡುತ್ತೇನೆ ಎಂದರು.

ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಪಕ್ಷದ ಹಿರಿಯ ನಾಯಕರು. ರಾಜ್ಯ ಎಲ್ಲಾ ಬೆಳವಣಿಗೆ ಗಳನ್ನು ಅಂದಾಜಿಸಿದ ನಂತರವೇ ಕೆಪಿಸಿಸಿಗೆ ಯಾರು ಅಧ್ಯಕ್ಷರಾಗಬೇಕು ಎಂಬ ಪ್ರಸ್ತಾವನೆ ಹೈಕಮಾಂಡ್ ಮುಂದೆ ಸಲ್ಲಿಸಿದ್ದಾರೆ ಎಂದರು.

ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷವನ್ನು ಮತ್ತೊಮ್ಮೆ ಅಧಿಕಾರಕ್ಕೆ ತರಲು ಎಲ್ಲ ರೀತಿಯ ಪ್ರಯತ್ನಗಳನ್ನು ನಡೆಸಲಾಗುತ್ತಿದೆ. ರಾಜ್ಯದಲ್ಲಿ ಬಿಜೆಪಿ ಸರಕಾರ ದುರಾಡಳಿತ ಆಡಳಿತ ನಡೆಸುತ್ತಿದೆ ಎಂದು ಖಂಡ್ರೆ ಇದೇ ವೇಳೆ ಆರೋಪಿಸಿದರು.

Facebook Comments

Sri Raghav

Admin