ಸುವರ್ಣಸೌಧದಲ್ಲಿ ಗ್ರಾಮೀಣಾಭಿವೃದ್ಧಿ ಕಚೇರಿ : ಸಚಿವ ಈಶ್ವರಪ್ಪ

ಈ ಸುದ್ದಿಯನ್ನು ಶೇರ್ ಮಾಡಿ

ಶಿವಮೊಗ್ಗ : ಬೆಳಗಾವಿಯ ಸುವರ್ಣಸೌಧದಲ್ಲಿ ಪಂಚಾಯತ್‍ರಾಜ್ ಹಾಗೂ ಗ್ರಾಮೀಣಾಭಿವೃದ್ಧಿ ಇಲಾಖೆ ಕಚೇರಿಯನ್ನು ತೆರೆಯಲಾಗುತ್ತದೆ ಎಂದು ಸಚಿವ ಕೆ.ಎಸ್.ಈಶ್ವರಪ್ಪ ಹೇಳಿದರು. ಶಿವಮೊಗ್ಗ ಪತ್ರಿಕಾ ಸಂವಾದದಲ್ಲಿ ಮಾತನಾಡಿದ ಅವರು, ಆ ಭಾಗದ ಜನರು ಬೆಂಗಳೂರಿಗೆ ಬರುವುದನ್ನು ತಪ್ಪಿಸುವ ಹಿನ್ನೆಲೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದೆ.

12 ಜಿಲ್ಲೆಯ ಜನರು ಅಲ್ಲಿಗೆ ಬಂದು ತಮ್ಮ ಸಮಸ್ಯೆಗಳ ಬಗ್ಗೆ ಮನವಿ ಸಲ್ಲಿಸಬಹುದು. ಈಗಾಗಲೇ ಸುವರ್ಣ ಸೌಧದಲ್ಲಿ ಒಂದು ಕೊಠಡಿ ನೀಡುವಂತೆ ಸ್ಪೀಕರ್ ಬಳಿ ಮನವಿ ಮಾಡಲಾಗಿದೆ. ಉಪಚುನಾವಣೆ ಘೋಷಣೆ ಯಾದ ಕಾರಣ ಕಚೇರಿ ತೆರೆಯುವುದು ವಿಳಂಬವಾಗಿದೆ ಎಂದು ಈಶ್ವರಪ್ಪ ಹೇಳಿದರು.

ಉಪಮುಖ್ಯಮಂತ್ರಿಯಾದಾಗ ನನಗೆ ಹೆಚ್ಚು ಭಯವಾಗಿರಲಿಲ್ಲ. ಆದರೆ ಈ ಬಾರಿ ಸಚಿವನಾದ ಮೇಲೆ ಹೆಚ್ಚು ಭಯವಾಗುತ್ತಿದೆ. ಬೆಳಗ್ಗೆ 10 6 ಗಂಟೆಯಿಂದ ರಾತ್ರಿ 10 ಗಂಟೆಯವರೆಗೂ ಜನರು ತಮ್ಮ ಸಮಸ್ಯೆಗಳನ್ನು ಹೇಳಿಕೊಳ್ಳಲು ಬರುತ್ತಿದ್ದಾರೆ. ಜನರ ಸಂಕಷ್ಟಗಳನ್ನು ಸಾಧ್ಯವಾದಷ್ಟು ಬಗೆಹರಿಸುವ ಪ್ರಯತ್ನವನ್ನು ನಾನು ಮಾಡುತ್ತಿದ್ದೇನೆ ಎಂದು ತಿಳಿಸಿದರು.

ಜಿ.ಪಂ. ಅಧ್ಯಕ್ಷರಿಗೆ ಗನ್‍ಮ್ಯಾನ್ ನೀಡುವ ವಿಷಯ ಪ್ರಸ್ತಾಪವಾಗಿದೆ. ಆದರೆ ಪೊಲೀಸ್ ಇಲಾಖೆಯಲ್ಲಿ ಸಿಬ್ಬಂದಿ ಕೊರತೆ ಇದೆ ಎಂದು ಪತ್ರಕರ್ತರ ಪ್ರಶ್ನೆಯೊಂದಕ್ಕೆ ಉತ್ತರಿಸಿದರು.

Facebook Comments