“ಈ ಜನ್ಮದಲ್ಲಿ ಸಿದ್ದರಾಮಯ್ಯ ಮತ್ತೆ ಸಿಎಂ ಆಗಲ್ಲ” : ಭವಿಷ್ಯ ನುಡಿದ ಈಶ್ವರಪ್ಪ

ಈ ಸುದ್ದಿಯನ್ನು ಶೇರ್ ಮಾಡಿ

ಮೈಸೂರು,ಜ.11-ಈ ಜನ್ಮದಲ್ಲಿ ಸಿದ್ದರಾಮಯ್ಯ ಮತ್ತೆ ಸಿಎಂ ಆಗಲ್ಲ. ಜೆಡಿಎಸ್ ಅಧಿಕಾರಕ್ಕೆ ಬರಲ್ಲ ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‍ರಾಜ್ ಸಚಿವ ಕೆ.ಎಸ್.ಈಶ್ವರಪ್ಪ ತಿಳಿಸಿದರು.  ಇಂದು ಬೆಳಗ್ಗೆ ಚಾಮುಂಡಿ ಬೆಟ್ಟಕ್ಕೆ ತೆರಳಿ ಪೂಜೆ ಸಲ್ಲಿಸಿದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, 2023ಕ್ಕೆ ಎಚ್.ಡಿ.ಕುಮಾರಸ್ವಾಮಿಯವರು ಮತ್ತೆ ಮುಖ್ಯಮಂತ್ರಿ ಆಗುತ್ತೇನೆ ಎಂಬ ಹೇಳಿಕೆಗೆ ಸಂಬಂಧಿಸಿದಂತೆ ಪ್ರಕ್ರಿಯಿಸಿ, ಕೆಲವರು ಹಗಲುಗನಸು ಕಾಣುತ್ತಿದ್ದಾರೆ. ಅದೇ ರೀತಿ ಕುಮಾರಸ್ವಾಮಿ-ಸಿದ್ದರಾಮಯ್ಯ ಕನಸುಕಾಣುತ್ತಿದ್ದಾರೆ ಎಂದರು.

ಸಿದ್ದರಾಮಯ್ಯ ನಾನೇ ಮುಖ್ಯಮಂತ್ರಿಯಾಗುತ್ತೆವೆ ಎನ್ನುತ್ತಾರೆ. ಅವರ ಪಕ್ಷದವರ ಯಾರಾದರೂ ಹೇಳಿದ್ದಾರಾ? ಕುಮಾರಸ್ವಾಮಿ ಸಹ ಅದೇ ರೀತಿ ಮಾತನಾಡಿದ್ದಾರೆ. ಇವರಿಬ್ಬರದು ಹಗಲುಗನಸು ಈ ಜನ್ಮದಲ್ಲಿ ಸಿದ್ದರಾಮಯ್ಯ ಸಿಎಂ ಆಗಲ್ಲ, ಜೆಡಿಎಸ್ ಅಧಿಕಾರಕ್ಕೆ ಬರಲ್ಲ ಎಂದು ಹೇಳಿದರು.

ನಂತರ ಪ್ರಶ್ನೆಯೊಂದಕ್ಕೆ ಉತ್ತರಿಸಿದ ಈಶ್ವರಪ್ಪ, ಮುಖ್ಯಮಂತ್ರಿ ಬದಲಾವಣೆ ಎಂದುಸ ಸುಮ್ಮನೆ ಮಾತನಾಡುತ್ತಾರೆ. ಇದು ಕೇವಲ ಸೃಷ್ಟಿ ಮಾಡುತ್ತಿರುವುದು ಅಷ್ಟೇ. ಕೇಂದ್ರ ನಾಯಕರು ಅಥವಾ ಶಾಸಕರು ಯಾರು ಹೇಳಿಲ್ಲ. ಇದನ್ನು ಹೇಳುತ್ತಿರುವುದು ಸಿದ್ದರಾಮಯ್ಯ ಒಬ್ಬರೇ ಎಂದು ಮಾರ್ಮಿಕವಾಗಿ ನುಡಿದರು.

ಯಡಿಯೂರಪ್ಪ ಮಂತ್ರಿಯಾಗಲ್ಲ ಎಂದು ಯತ್ನಾಳ್ ಹೇಳಿರುವ ವಿಚಾರಕ್ಕೆ ಸಂಬಂಧಿಸಿದಂತೆ ಮಾತನಾಡಿದ ಅವರು, ಅವರನ್ನು ಮಂತ್ರಿ ಮಾಡುವುದು ಬಿಡುವುದು ಸಿಎಂಗೆ ಬಿಟ್ಟಿದ್ದು. ಒಂದು ವೇಳೆ ಕೇಂದ್ರ ನಾಯಕರು ಮಂತ್ರಿ ಮಾಡುತ್ತೇವೆ ಎಂದರೆ ಒಪ್ಪಿಕೊಳ್ಳಬೇಕಾಗುತ್ತದೆ. ಯಡಿಯೂರಪ್ಪ ಅವರು ಪಕ್ಷದ ನಿಷ್ಠಾವಂತ ಅವರು ಕೆಲವೊಮ್ಮೆ ಏನೇನೋ ಟೀಕೆ ಮಾಡಿ ಬಿಡುತ್ತಾರೆ. ಅದು ತಪ್ಪು ಎಂದರು ಹೇಳಿದರು.

ಯುವರಾಜ್ ಬಗ್ಗೆ ಕೇಳಿದ ಪ್ರಶ್ನೆಗೆ ಆತನ ಮುಖ್ಯವನ್ನು ನಾನು ಟಿವಿಯಲ್ಲೇ ನೋಡಿದ್ದು. ಬುದ್ದಿವಂತಿಕೆಯಿಂದ ಅನೇಕರಿಗೆ ಮೋಸ ಮಾಡಿದ್ದಾನೆ ಎಂದರು.  ಬಿಜೆಪಿಯವರನ್ನು ಯುವರಾಜ್ ಭೇಟಿಯಾಗಿದ್ದಾರೆ ಎಂದು ದಿನೇಶ್ ಗುಂಡೂರಾವ್ ಹೇಳಿದ್ದು ಈ ಬಗ್ಗೆ ತನಿಖೆಯಾಗಬೇಕು ಎಂದಿದ್ದಾನೆ. ವೇಣುಗೋಪಾಲ್ ಅವರನ್ನು ಯುವರಾಜ್ ಭೇಟಿಯಾಗಿರುವ ಬಗ್ಗೆ ತನಿಖೆ ಬೇಡವೇ ಎಂದು ಪ್ರಶ್ನಿಸಿದರು.

Facebook Comments