‘ಮರು ಪರಿಶೀಲನೆ ನಾಟಕ ಬೇಡ, ಜಿಂದಾಲ್ ಭೂಮಿ ವಾಪಾಸ್ ಪಡೆಯಿರಿ : ಈಶ್ವರಪ್ಪ

ಈ ಸುದ್ದಿಯನ್ನು ಶೇರ್ ಮಾಡಿ

ಬಳ್ಳಾರಿ,ಜೂ 16- ಐಎಂಎ ವಂಚನೆ ಪ್ರಕರಣವನ್ನು ಸಿಬಿಐಗೆ ವಹಿಸಲೇಬೇಕೆಂದು ಮಾಜಿ ಉಪ ಮುಖ್ಯಮಂತ್ರಿ ಕೆ.ಎಸ್. ಈಶ್ವರಪ್ಪ ಆಗ್ರಹಿಸಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಾವಿರಾರು ಕೋಟಿ ರೂ. ವಂಚನೆ ಮಾಡಿರುವ ಐಎಂಎ ಮಾಲೀಕ ಮನ್ಸೂರು ಆಲಿಖಾನ್‍ಗೆ 600ಕೋಟಿ ರೂ.ಗಳಷ್ಟು ಸಾಲ ಕೊಡಿಸಲು ಸಚಿವರೊಬ್ಬರು ಶಿಫಾರಸ್ಸು ಮಾಡಿದ್ದಾರೆಂಬ ಆರೋಪವಿದೆ.

ಪ್ರಕರಣದಲ್ಲಿ 30ಸಾವಿರಕ್ಕೂ ಹೆಚ್ಚು ಜನರಿಗೆ ಅನ್ಯಾಯವಾಗಿದೆ. ಈ ಬೃಹತ್ ದೋಖಾ ಪ್ರಕರಣವನ್ನು ಸಿಬಿಐ ತನಿಖೆಗೆ ವಹಿಸಬೇಕೆಂದು ಅವರು ಒತ್ತಾಯಿಸಿದರು.

ಮರು ಪರಿಶೀಲನೆ ನಾಟಕ ಬೇಡ: ಜಿಂದಾಲ್ ಕಂಪನಿಗೆ 3680 ಎಕರೆ ಭೂಮಿ ಪರಭಾರೆ ವಿಚಾರದಲ್ಲಿ ರಾಜ್ಯ ಸರ್ಕಾರ ಮರು ಪರಿಶೀಲನೆ ಎಂಬ ನಾಟಕವಾಡುತ್ತಿದೆ. ಜಿಂದಾಲ್‍ಗೆ ಭೂಮಿಯನ್ನು ಕೊಡುವ ವಿಚಾರದಲ್ಲಿ ಸರ್ಕಾರದ ಉನ್ನತ ಮಟ್ಟದ ಅಧಿಕಾರಿಗಳು, ರಾಜಕಾರಣಿಗಳು ಕೂಡ ಭಾಗಿಯಾಗಿದ್ದಾರೆ.

ಮರು ಪರಿಶೀಲನೆ ನಾಟಕವನ್ನು ಕೈಬಿಟ್ಟು ಮುಖ್ಯಮಂತ್ರಿ ಕುಮಾರಸ್ವಾಮಿ ಗಟ್ಟಿತನ ಪ್ರಯತ್ನಿಸಲಿ. ಭೂಮಿ ಕೊಡುವ ನಿರ್ಧಾರದಿಂದ ಹಿಂದೆ ಸರಿಯಲಿ ಎಂದು ಹೇಳಿದ್ದಾರೆ.  ಕಾಂಗ್ರೆಸ್ ಪಕ್ಷದವರೇ ಆದ ಎಚ್.ಕೆ.ಪಾಟೀಲ್, ಎಸ್.ಆರ್.ಪಾಟೀಲ್, ಆನಂದ್ ಸಿಂಗ್ ಅವರು ಜಿಂದಾಲ್‍ಗೆ ಭೂಮಿ ಕೊಡುವ ವಿಷಯಕ್ಕೆ ಸಂಬಂಧಿಸಿದಂತೆ ತೀವ್ರ ವಿರೋಧ ವ್ಯಕ್ತಪಡಿಸಿದ್ದಾರೆ.

ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಡ್ಯಾನ್ಸ್ ಮಾಡಿಕೊಂಡು, ತೊಡೆ ತಟ್ಟಿಕೊಂಡು ಬಳ್ಳಾರಿಗೆ ಪಾದಯಾತ್ರೆ ಮಾಡಿದ್ದರು. ಡಿ.ಕೆ.ಶಿವಕುಮಾರ್ ಅವರೂ ಕೂಡಾ ಭಾರೀ ಮಾತನಾಡುತ್ತಿದ್ದರು. ಆದರೆ ಈಗ ಎಲ್ಲರೂ ಮೌನ ವಹಿಸಿದ್ದಾರೆ ಏಕೆ ಎಂದು ಪ್ರಶ್ನಿಸಿದರು.

Facebook Comments

( ಎಚ್ಚರಿಕೆ..! : ಈ ಸಂಜೆ ಸುದ್ದಿಗಳನ್ನು ನಕಲು ಮಾಡುವವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗುತ್ತಿದೆ ) > #ವಾಟ್ಸಾಪ್‌ನಲ್ಲಿ ಸುದ್ದಿಗಳನ್ನು ಪಡೆಯಲು 7795582478 ಸಂಖ್ಯೆಯನ್ನು ನಿಮ್ಮ ಮೊಬೈಲ್ ನಲ್ಲಿ SAVE ಮಾಡಿಕೊಂಡು HI EESANJE ಎಂದು ಸಂದೇಶ ಕಳಿಸಿ

Sri Raghav

Admin