“ನನ್ನ ರಾಜೀನಾಮೆ ಕೇಳುವ ಮುನ್ನ ನೀವು ರಾಜೀನಾಮೆ ಕೊಡಿ”

ಈ ಸುದ್ದಿಯನ್ನು ಶೇರ್ ಮಾಡಿ

ಶಿವಮೊಗ್ಗ, ಏ.5- ನನ್ನ ರಾಜೀನಾಮೆ ಕೇಳುತ್ತಿರುವ ಸಿದ್ದರಾಮಯ್ಯನವರಿಗೆ ತಲೆಕೆಟ್ಟಿದ್ದು, ಅವರು ವಿಪಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಬೇಕೆಂದು ಸಚಿವ ಈಶ್ವರಪ್ಪ ಆಗ್ರಹಿಸಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಿದ್ದರಾಮಯ್ಯಗೆ ರಾಜ್ಯದಲ್ಲಿ ನಡೆಯುತ್ತಿರುವ ಅಭಿವೃದ್ಧಿ ಕಾರ್ಯಗಳನ್ನು ನೋಡಲಿಕ್ಕೂ ಆಗ್ತಾ ಇಲ್ಲ, ಕೇಳಲಿಕ್ಕೂ ಆಗ್ತಾ ಇಲ್ಲ, ಅನುಭವಿಸಲಿಕ್ಕೂ ಆಗ್ತಾ ಇಲ್ಲ ಎಂದರು.

ಮುಖ್ಯಮಂತ್ರಿ ಸ್ಥಾನ ಕಳೆದುಕೊಂಡ ನಂತರ ಅವರಿಗೆ ಹುಚ್ಚು ಹಿಡಿದಂತೆ ಆಗಿದೆ. ನನ್ನ ಮಾತುಗಳನ್ನು ಅಧಿಕಾರಿಗಳು ಕೇಳುತ್ತಿಲ್ಲ, ಹಾಗಾಗಿ ಈಶ್ವರಪ್ಪನವರು ರಾಜೀನಾಮೆ ನೀಡಬೇಕು ಹಾಗೂ ರಾಜ್ಯದಲ್ಲಿ ರಾಷ್ಟ್ರಪತಿ ಆಳ್ವಿಕೆ ಹೇರಬೇಕು ಎಂದು ಸಿದ್ದರಾಮಯ್ಯ ಹೇಳಿರುವುದಕ್ಕೆ ಟಾಂಗ್ ಕೊಟ್ಟಿದ್ದಾರೆ.

ನಾಳೆ ಅಥವಾ ನಾಡಿದ್ದು ನನ್ನ ಇಲಾಖೆಯ ಅಧಿಕಾರಿಗಳು ಮಾಡಿರುವ ಅಭಿವೃದ್ಧಿ ಪಟ್ಟಿಯನ್ನು ಬಿಡುಗಡೆ ಮಾಡುತ್ತೇನೆ. ಅಧಿಕಾರಿಗಳು ಈಶ್ವರಪ್ಪನವರ ಮಾತು ಕೇಳುತ್ತಿಲ್ಲವೆಂದು ಸಿದ್ದರಾಮಯ್ಯ ಹೇಳಿರುವುದಕ್ಕೆ ತಿರುಗೇಟು ನೀಡಿದ್ದಾರೆ.

ಕಾಂಗ್ರೆಸ್ ನಲ್ಲಿರುವ ಪರಿಸ್ಥಿತಿ ನೋಡಿ ಕೇಂದ್ರದಿಂದ ನಾಯಕರು ಭೇಟಿ ನೀಡುವ ಪರಿಸ್ಥಿತಿ ನಿರ್ಮಾಣವಾಗಿತ್ತು. ಅದಕ್ಕೆ ರಮೇಶ್ ಕುಮಾರ್ ಹೇಳಿಕೆ ಮತ್ತು ಮೈಸೂರಿನ ಮೇಯರ್, ಉಪಮೇಯರ್ ಚುನಾವಣೆಯೇ ಸಾಕ್ಷಿ. ಇಷ್ಟೊಂದು ಅಸಮಾಧಾನವಿರುವ ಪಕ್ಷದಲ್ಲಿರುವ ಸಿದ್ದರಾಮಯ್ಯ ವಿಪಕ್ಷ ನಾಯಕ ಸ್ಥಾನಕ್ಕೆ ರಾಜೀನಾಮೆ ನೀಡಬೇಕೆಂದು ಈಶ್ವರಪ್ಪ ಆಗ್ರಹಿಸಿದ್ದಾರೆ.

Facebook Comments