ಮೋದಿ ಸುನಾಮಿಯಲ್ಲಿ ಕೊಚ್ಚಿ ಹೋದ 9 ಮಾಜಿ ಮುಖ್ಯಮಂತ್ರಿಗಳು…!

ಈ ಸುದ್ದಿಯನ್ನು ಶೇರ್ ಮಾಡಿ

ನವದೆಹಲಿ, ಮೇ 24- ಲೋಕಸಭೆ ಚುನಾವಣೆಯ ಫಲಿತಾಂಶ ಸೋಲು-ಗೆಲುವಿನ ಅನೇಕ ದಾಖಲೆಗಳನ್ನು ಸೃಷ್ಟಿಸಿದೆ. ದೇಶದ ಅತ್ಯಂತ ಹಳೆಯ ಪಕ್ಷ ಕಾಂಗ್ರೆಸ್ ಹೀನಾಯ ಸೋಲು ಅನುಭವಿಸಿದ್ದು, ಮೋದಿ ಅಲೆಯಲ್ಲಿ ವಿವಿಧ ರಾಜ್ಯಗಳ 9 ಮಾಜಿ ಮುಖ್ಯಮಂತ್ರಿಗಳು ಕೊಚ್ಚಿ ಹೋಗಿದ್ದಾರೆ.

ಬಿಜೆಪಿ ನೇತೃತ್ವದ ಎನ್ ಡಿಎ 349 ಸ್ಥಾನಗಳನ್ನು ಗೆಲ್ಲುವ ಮೂಲಕ ಭರ್ಜರಿ ಬಹುಮತದೊಂದಿಗೆ ಸತತ ಎರಡನೇ ಬಾರಿ ಅಧಿಕಾರಕ್ಕೇರಲು ಸಜ್ಜಾಗಿದೆ.

ಚಿಕ್ಕಬಳ್ಳಾಪುರದಲ್ಲಿ ಕರ್ನಾಟಕದ ಮಾಜಿ ಮುಖ್ಯಮಂತ್ರಿ ಎಂ.ವೀರಪ್ಪ ಮೊಯ್ಲಿ, ಭೋಪಾಲ್‍ನಲ್ಲಿ ಮಧ್ಯಪ್ರದೇಶ ಮಾಜಿ ಸಿಎಂ ದಿಗ್ವಿಜಯ್ ಸಿಂಗ್ ಪರಾಭವಗೊಂಡಿದ್ದಾರೆ. ಮಹಾರಾಷ್ಟ್ರದ ಮಾಜಿ ಮುಖ್ಯಮಂತ್ರಿಗಳಾದ ಅಶೋಕ್ ಚವಾಣ್ ಮತ್ತು ಸುಶೀಲ್ ಕುಮಾರ್ ಶಿಂಧೆ ಅವರು ಹೀನಾಯವಾಗಿ ಸೋತಿದ್ದಾರೆ.

ಈಶಾನ್ಯ ದೆಹಲಿಯಲ್ಲಿ ದೆಹಲಿ ಮಾಜಿ ಮುಖ್ಯಮಂತ್ರಿ ಶೀಲಾ ದೀಕ್ಷಿತ್, ಹರಿಯಾಣ ಮಾಜಿ ಸಿಎಂ ಭೂಪಿಂದರ್ ಸಿಂಗ್ ಹೂಡಾ, ಉತ್ತರಾಖಂಡ್ ಮಾಜಿ ಮುಖ್ಯಮಂತ್ರಿ ಹರೀಶ್ ರಾವತ್ ಅವರೂ ಸೋಲಿನ ರುಚಿ ಅನುಭವಿಸಿದ್ದಾರೆ.

ಮೇಘಾಲಯ ಮಾಜಿ ಮುಖ್ಯಮಂತ್ರಿ ಮುಕುಲ್ ಸಂಗ್ಮಾ ಮತ್ತು ಅರುಣಾಚಲ ಮಾಜಿ ಮುಖ್ಯಮಂತ್ರಿ ನಬಮ್ ಟುಕಿ ಅವರು ಸೋತು ಸುಣ್ಣವಾಗಿದ್ದಾರೆ.

Facebook Comments

( ಎಚ್ಚರಿಕೆ..! : ಈ ಸಂಜೆ ಸುದ್ದಿಗಳನ್ನು ನಕಲು ಮಾಡುವವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗುತ್ತಿದೆ ) > #ವಾಟ್ಸಾಪ್‌ನಲ್ಲಿ ಸುದ್ದಿಗಳನ್ನು ಪಡೆಯಲು 7795582478 ಸಂಖ್ಯೆಯನ್ನು ನಿಮ್ಮ ಮೊಬೈಲ್ ನಲ್ಲಿ SAVE ಮಾಡಿಕೊಂಡು HI EESANJE ಎಂದು ಸಂದೇಶ ಕಳಿಸಿ

Sri Raghav

Admin