ಬ್ರೇಕಿಂಗ್ : ಮಾಜಿ ಸಚಿವ ಎಚ್.ಡಿ.ರೇವಣ್ಣ ಭದ್ರತಾ ಸಿಬ್ಬಂದಿಗಳಿಗೆ ಕೊರೊನಾ..!

ಈ ಸುದ್ದಿಯನ್ನು ಶೇರ್ ಮಾಡಿ

ಹಾಸನ, ಜೂ.30- ಮಾಜಿ ಸಚಿವ ಎಚ್.ಡಿ.ರೇವಣ್ಣ ಅವರ ಮೂವರು ಭದ್ರತಾ ಸಿಬ್ಬಂದಿಗಳಿಗೆ ಕೊರೊನಾ ಸೋಂಕು ಇರುವುದು ದೃಢಪಟ್ಟಿದೆ.  ಒಟ್ಟು ಆರು ಜನ ಭದ್ರತಾ ಸಿಬ್ಬಂದಿಯಾಗಿ ಕಾರ್ಯನಿರ್ವಹಿಸುತ್ತಿದ್ದು, ಅವರಲ್ಲಿ ಮೂವರಿಗೆ ಕೊರೊನಾ ಪಾಸಿಟಿವ್ ಇರುವುದು ದೃಢಪಟ್ಟಿದೆ.

ನಿನ್ನೆ ತಪಾಸಣೆ ಮಾಡಲಾಗಿದ್ದು, ವರದಿಯಲ್ಲಿ ಪಾಸಿಟಿವ್ ಪತ್ತೆಯಾಗಿದೆ. ಇಬ್ಬರು ಪಿಎಗಳ ಕೊರೊನಾ ಟೆಸ್ಟ್ ನೆಗೆಟಿವ್ ಬಂದಿದೆ.

ಇಂದು ರೇವಣ್ಣ ಕೂಡ ತಪಾಸಣೆಗೆ ಒಳಗಾಗಲಿದ್ದು, ಭದ್ರತಾ ಸಿಬ್ಬಂದಿಗೆ ಪಾಸಿಟಿವ್ ಕಂಡುಬಂದ ಹಿನ್ನೆಲೆಯಲ್ಲಿ ರೇವಣ್ಣ ಅವರು ಕ್ವಾರಂಟೈನ್ ಆಗುವುದು ಅನಿವಾರ್ಯವಾಗಲಿದೆ.

ರೇವಣ್ಣ ಅವರ ಮೂವರು ಭದ್ರತಾ ಸಿಬ್ಬಂದಿಗೆ ಕೊರೊನಾ ಪಾಸಿಟಿವ್ ಸೇರಿ ತಾಲ್ಲೂಕಿನ ಏಳು ಮಂದಿಯಲ್ಲಿ ಸೋಂಕು ಪತ್ತೆಯಾಗಿದೆ.

ಹಾಸನದ ಹೇಮಾವತಿ ನಗರದ ಒಬ್ಬರಲ್ಲಿ ಸೋಂಕು ಕಂಡುಬಂದಿದೆ. ಹಾಸನ ಜಿಲ್ಲೆಯಲ್ಲಿ ಒಟ್ಟು ಸೋಂಕಿತರ ಸಂಖ್ಯೆ 400ರ ಗಡಿ ದಾಟಿದೆ.  ಜಿಲ್ಲೆಯಲ್ಲಿ ಸಾಕಷ್ಟು ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಂಡರೂ ಕೂಡ ಸೋಂಕಿನ ಪ್ರಮಾಣ ಏರಿಕೆಯಾಗುತ್ತಲೇ ಇದೆ.

ಹೊರರಾಜ್ಯಗಳಿಂದ ಬಂದವರಿಂದ ಸೋಂಕು ಹೆಚ್ಚಾಗಿದೆ. ಕ್ವಾರಂಟೈನ್ ಮತ್ತು ಸೋಂಕಿತರಿಗೆ ಚಿಕಿತ್ಸೆ ನೀಡಲಾಗುತ್ತಿದ್ದು, ಗುಣಮುಖರಾಗುತ್ತಿರುವವರ ಪ್ರಮಾಣವೂ ಕೂಡ ಹೆಚ್ಚಾಗಿದೆ.

Facebook Comments