ಬೈಕ್ ಅಪಘಾತದಲ್ಲಿ ಬಿಜೆಪಿ ಮಾಜಿ ಶಾಸಕ ದತ್ತು ಹಕ್ಯಾಗೋಳ ದುರ್ಮರಣ

ಈ ಸುದ್ದಿಯನ್ನು ಶೇರ್ ಮಾಡಿ

BJP-Dattu

ಚಿಕ್ಕೋಡಿ. ಡಿ.28 : ಲಾರಿ ಹಾಗೂ ಬೈಕ್ ನಡುವೆ ಡಿಕ್ಕಿ ಸಂಭವಿಸಿ ಚಿಕ್ಕೋಡಿ-ಸದಲಗಾ ವಿಧಾನಸಭಾ ಕ್ಷೇತ್ರದ ಮಾಜಿ ಶಾಸಕ ದತ್ತು ಹಕ್ಯಾಗೋಳ (78) ಹಾಗೂ ಮತ್ತೋರ್ವರು ಮೃತಪಟ್ಟಿದ್ದಾರೆ.

ಬೆಳಗಾವಿ ಜಿಲ್ಲೆಯ ಹುಕ್ಕೇರಿ ತಾಲೂಕಿನ ಹಿಟ್ನಿ ಕ್ರಾಸ್ ಸಮೀಪದ ರಾಷ್ಟ್ರೀಯ ಹೆದ್ದಾರಿ 4ರಲ್ಲಿ ಅಪಘಾತ ಸಂಭವಿಸಿದೆ. ಘಟನೆಯಲ್ಲಿ ಬೈಕ್ ಸವಾರ ಸುರೇಶ್ ಈರಪ್ಪ ಗಡೇಕಾರ (50) ಗಂಭೀರವಾಗಿ ಗಾಯಗೊಂಡಿದ್ದು, ಸಂಕೇಶ್ವರ ಸಾರ್ವಜನಿಕ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ.

ದತ್ತು ಅವರು ಬೆಂಬಲಿಗನೊಂದಿಗೆ ನಿಪ್ಪಾಣಿಯಿಂದ ಬೆಳಗಾವಿಗೆ ತೆರಳುತ್ತಿದ್ದರು.ರಸ್ತೆ ಬದಿ ಬೈಕ್‌ ನಿಲ್ಲಿಸಿ ಫೋನ್‌ನಲ್ಲಿ ಮಾತನಾಡುತ್ತಿದ್ದ ವೇಳೆ ಹಿಂಬದಿಯಿಂದ ಬಂದ ಲಾರಿ ಢಿಕ್ಕಿಯಾಗಿ ದುರಂತ ಸಂಭವಿಸಿದೆ. ಸಂಕೇಶ್ವರ ಪೊಲೀಸ್‌ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.

ಚಿಕ್ಕೋಡಿ ತಾಲೂಕಿನ ಕೆರೂರು ನಿವಾಸಿ ದತ್ತು ಹಕ್ಯಾಗೋಳ ಅವರು 2004ರಲ್ಲಿ ಬಿಜೆಪಿಯಿಂದ ಚಿಕ್ಕೋಡಿ-ಸದಲಗಾ (ಪರಿಶಿಷ್ಟ ಜಾತಿ ಮೀಸಲು ಕ್ಷೇತ್ರದಿಂದ) ಶಾಸಕರಾಗಿ ಆಯ್ಕೆಯಾಗಿದ್ದರು.

Facebook Comments

( ಎಚ್ಚರಿಕೆ..! : ಈ ಸಂಜೆ ಸುದ್ದಿಗಳನ್ನು ನಕಲು ಮಾಡುವವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗುತ್ತಿದೆ ) > #ವಾಟ್ಸಾಪ್‌ನಲ್ಲಿ ಸುದ್ದಿಗಳನ್ನು ಪಡೆಯಲು 7795582478 ಸಂಖ್ಯೆಯನ್ನು ನಿಮ್ಮ ಮೊಬೈಲ್ ನಲ್ಲಿ SAVE ಮಾಡಿಕೊಂಡು HI EESANJE ಎಂದು ಸಂದೇಶ ಕಳಿಸಿ

Sri Raghav

Admin