ಪದವಿ‌‌, ಸ್ನಾತಕೋತ್ತರ ಪದವಿ, ಡಿಪ್ಲೊಮಾ ಕೋರ್ಸ್‌ಗಳ ಪರೀಕ್ಷಾ ಶುಲ್ಕದಲ್ಲಿ ಶೇ50 ರಷ್ಟು ರಿಯಾಯಿತಿ

ಈ ಸುದ್ದಿಯನ್ನು ಶೇರ್ ಮಾಡಿ

ಬೆಂಗಳೂರು: ಪದವಿ‌‌, ಸ್ನಾತಕೋತ್ತರ ಪದವಿ ಹಾಗೂ ಡಿಪ್ಲೊಮಾ ಕೋರ್ಸ್ ಗಳ ಮಧ್ಯಂತರ ಸೆಮಿಸ್ಟರ್ ಗಳ ಪರೀಕ್ಷೆ ಗಳನ್ನು ಕೋವಿಡ್ ಕಾರಣಕ್ಕೆ ರದ್ದು‌ ಮಾಡಿರುವುದರಿಂದ ಮುಂದಿ‌ನ ಸೆಮಿಸ್ಟರ್ ಗಳ ಪರೀಕ್ಷಾ ಶುಲ್ಕದಲ್ಲಿ ಶೇ50 ರಷ್ಟು ರಿಯಾಯಿತಿ ನೀಡಲು ತೀರ್ಮಾನಿಸಲಾಗಿದೆ ಎಂದು ಉನ್ನತ ಶಿಕ್ಷಣ ಸಚಿವರೂ ಆದ ಉಪ ಮುಖ್ಯಮಂತ್ರಿ ಡಾ.ಸಿ.ಎ‌ನ್. ಅಶ್ವತ್ಥನಾರಾಯಣ ಅವರು ತಿಳಿಸಿದರು.

ಈ ಸಂಬಂಧ ಸುತ್ತೋಲೆಯನ್ನು ಎಲ್ಲ ವಿಶ್ವವಿದ್ಯಾಲಯಗಳಿಗೆ ಕಳುಹಿಸಲು ಉನ್ನತ ಶಿಕ್ಷಣ ಇಲಾಖೆ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ರಮಣರೆಡ್ಡಿ ಅವರಿಗೆ ಸೂಚಿಸಿದರು.

ಕೆಲವು ವಿಶ್ವವಿದ್ಯಾಲಯಗಳು ಈಗಾಗಲೇ ಪರೀಕ್ಷಾ ಶುಲ್ಕವನ್ನು ಸಂಗ್ರಹಿಸಿದ್ದು ಅದನ್ನು ವಾಪಸ್ ಕೊಡಿಸಿ‌ ಎನ್ನುವ ಮನವಿ ವಿದ್ಯಾರ್ಥಿಗಳಿಂದ ಬಂದಿತ್ತು.

ಇದಕ್ಕೆ ಸ್ಪಂದಿಸಿದ ಡಿಸಿಎಂ ಅವರು‌ ಪರೀಕ್ಷೆ ರದ್ದಾಗಿದ್ದರೂ ಮೌಲ್ಯಮಾಪನ ಪ್ರಕ್ರಿಯೆ ಇರುತ್ತದೆ. ಹೀಗಾಗಿ ಮುಂದಿ‌ನ ಸೆಮಿಸ್ಟರ್ ಗಳ ಪರೀಕ್ಷಾ ಶುಲ್ಕ ದಲ್ಲಿ ಶೇ 50 ರಷ್ಟು ರಿಯಾಯಿತಿ ನೀಡಲು ಸೂಚಿಸಲಾಗುವುದು ಎಂದು ಅವರು ತಿಳಿಸಿದರು.

Facebook Comments

Sri Raghav

Admin