ಗುಜರಾತ್, ಹರಿಯಾಣ, ದೆಹಲಿಯಲ್ಲಿ ಬಿಜೆಪಿಗೆ 100% ರಿಸಲ್ಟ್..!

ಈ ಸುದ್ದಿಯನ್ನು ಶೇರ್ ಮಾಡಿ

ನವದೆಹಲಿ, ಮೇ 20-ಗುಜರಾತ್, ಹರಿಯಾಣ ಮತ್ತು ದೆಹಲಿಯಲ್ಲಿ ಬಿಜೆಪಿ ಶೇಕಡ 100ರಷ್ಟು ಫಲಿತಾಂಶ ಗಳಿಸಿ ಕ್ಲೀನ್ ಸ್ವೀಪ್ ಮಾಡಲಿದೆ ಎಂದು ಚುನಾವಣೋತ್ತರ (ಎಕ್ಸಿಟ್ ಪೋಲ್) ಸಮೀಕ್ಷೆಗಳು ಹೇಳಿವೆ.

ಪ್ರಧಾನಿ ನರೇಂದ್ರ ಮೋದಿ ಅವರ ತವರು ರಾಜ್ಯ ಗುಜರಾತ್‍ನ ಎಲ್ಲ 26 ಲೋಕಸಭಾ ಕ್ಷೇತ್ರಗಳಲ್ಲೂ ಬಿಜೆಪಿ ಜಯ ದಾಖಲಿಸಿದೆ ಎಂದು ನಿನ್ನೆ ರಾತ್ರಿ ಪ್ರಕಟವಾದ ಸಮೀಕ್ಷೆಯಲ್ಲಿ ತಿಳಿಸಲಾಗಿದೆ.

ಗುಜರಾತ್‍ನಲ್ಲಿ ಲೋಕಸಭಾ ಚುನಾವಣಾ ಪ್ರಚಾರದ ವೇಳೆ ಪ್ರಧಾನಿ ನರೇಂದ್ರ ಮೋದಿ, ಕೇಂದ್ರದಲ್ಲಿ ಮತ್ತೆ ಬಿಜೆಪಿ ಅಧಿಕಾರ ಗದ್ದುಗೆಗೇರಿ ನಾನು ಮತ್ತೊಮ್ಮೆ ಪ್ರಧಾನಮಂತ್ರಿಯಾಗಬೇಕಾದರೆ ಎಲ್ಲ 26 ಕ್ಷೇತ್ರಗಳಲ್ಲಿ ನಮ್ಮ ಪಕ್ಷ ಗೆಲ್ಲುವಂತೆ ನೀವು ಆಶೀರ್ವದಿಸಬೇಕೆಂದು ಕೋರಿದ್ದರು.

ಹರಿಯಾಣದ ಎಲ್ಲ 10 ಕ್ಷೇತ್ರಗಳಲ್ಲೂ ಬಿಜೆಪಿ ಜಯ ದಾಖಲಿಸಲಿದೆ ಎಂದು ಚುನಾವಣಾ ಸಮೀಕ್ಷೆಯಲ್ಲಿ ತಿಳಿಸಲಾಗಿದೆ.  ರಾಜಧಾನಿ ದೆಹಲಿಯ ಎಲ್ಲ ಏಳು ಕ್ಷೇತ್ರಗಳು ಬಿಜೆಪಿ ಪಾಲಾಗಲಿದ್ದು, ಅರವಿಂದ್ ಕೇಜ್ರಿವಾಲ್ ನೇತೃತ್ವದ ಆಮ್ ಆದ್ಮಿ ಪಕ್ಷಕ್ಕೆ ಭಾರೀ ಮುಖಭಂಗವಾಗಲಿದೆ ಎಂದು ಸಮೀಕ್ಷೆ ಭವಿಷ್ಯ ನುಡಿದಿದೆ.

ಕೆಲವೊಮ್ಮ್ಮೆ ಚುನಾವಣಾ ಸಮೀಕ್ಷೆಗಳು ಹುಸಿಯಾಗುವುದುಂಟು. ಮೇ 23ರಂದು ಅಧಿಕೃತ ಚುನಾವಣಾ ಫಲಿತಾಂಶ ಪ್ರಕಟಗೊಳ್ಳಲಿದ್ದು, ಆನಂತರವಷ್ಟೇ ಯಾವ ರಾಜ್ಯಗಳಲ್ಲಿ ಯಾವ ಪಕ್ಷಗಳು ಗೆಲುವು ಸಾಧಿಸಲಿವೆ ಮತ್ತು ಕೇಂದ್ರದಲ್ಲಿ ಅಧಿಕಾರ ಚುಕ್ಕಾಣಿ ಹಿಡಿಯುವ ಪಕ್ಷ ಯಾವುದೆಂಬುದು ಸ್ಪಷ್ಟವಾಗಿ ತಿಳಿದುಬರಲಿದೆ.

Facebook Comments

Sri Raghav

Admin