ಬೆಲೆ ಏರಿಕೆ ಬಿಸಿ, ವಿದೇಶಗಳಿಗೆ ಈರುಳ್ಳಿ ರಫ್ತು ನಿಷೇಧ..!

ಈ ಸುದ್ದಿಯನ್ನು ಶೇರ್ ಮಾಡಿ

ನವದೆಹಲಿ, ಸೆ.29-ದೇಶದ ಅನೇಕ ರಾಜ್ಯಗಳಲ್ಲಿ ನಿರಂತರವಾಗಿ ಏರಿಕೆಯಾಗುತ್ತಿರುವ ಈರುಳ್ಳಿಬೆಲೆಯಿಂದ ಗ್ರಾಹಕರು ಕಣ್ಣೀರು ಹಾಕುವಂತಾಗಿದ್ದು, ದರ ಹೆಚ್ಚಳಕ್ಕೆ ತಡೆಗಟ್ಟಲು ಕೇಂದ್ರ ಸರ್ಕಾರ ಮುಂದಾಗಿದೆ. ಎಲ್ಲಾ ವಿಧದ ಈರುಳ್ಳಿಗಳನ್ನು ವಿದೇಶಗಳಿಗೆ ರಫ್ತು ಮಾಡುವುದನ್ನು ತಕ್ಷಣದಿಂದಲೇ ಜಾರಿಗೆ ಬರುವಂತೆ ಕೇಂದ್ರ ಸರ್ಕಾರ ನಿಷೇಧಿಸಿದೆ.

ಈ ಸಂಬಂಧ ಕೇಂದ್ರ ಕೃಷಿ ಸಚಿವಾಲಯ ಎಲ್ಲಾ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಿಗೆ ಸೂಚನೆ ನೀಡಿ ಈರುಳ್ಳಿ ರಫ್ತುಗಳಿಗೆ ಮುಂದಿನ ಆದೇಶದ ತನಕ ಕಡಿವಾಣ ಹಾಕುವಂತೆ ಸೂಚಿಸಿದೆ. ದೇಶದಲ್ಲಿ ಈರುಳ್ಳಿ ಉತ್ಪಾದನೆ ಕುಂಠಿತವಾಗಿದ್ದು, ಬೆಲೆ ಏರಿಕೆಯಾಗುತ್ತಿದೆ.

ಇಂತಹ ಸಂದರ್ಭದಲ್ಲಿ ಈರುಳ್ಳಿಯನ್ನು ರಫ್ತು ಮಾಡುವುದರಿಂದ ಮತ್ತಷ್ಟು ಸಮಸ್ಯೆಯಾಗಲಿದೆ ಎಂಬ ವಾಸ್ತವ ಸಂಗತಿಯನ್ನು ಪರಿಗಣಿಸಿ ನಿಷೇಧ ನಿರ್ಬಂಧ ವಿಧಿಸಿದೆ. ಕರ್ನಾಟಕ ಸೇರಿದಂತೆ ದೇಶದ ಅನೇಕ ರಾಜ್ಯಗಳಲ್ಲಿ ಈರುಳ್ಳಿ ಬೆಲೆ 60 ರಿಂದ 80ರೂ.ಗಳವರೆಗೆ ಏರಿಕೆಯಾಗಿದೆ. ಇದರಿಂದ ಗ್ರಾಹಕರು ಕಂಗಾಲಾಗಿದ್ದು, ದರ ಇಳಿಸಲು ಕ್ರಮಕೈಗೊಳ್ಳುವಂತೆ ಸರ್ಕಾರವನ್ನು ಆಗ್ರಹಿಸಿದ್ದಾರೆ.

Facebook Comments