ಆಟೋ ಚಾಲಕನ ಸೆರೆ: ಆಭರಣ ವಶ

ಈ ಸುದ್ದಿಯನ್ನು ಶೇರ್ ಮಾಡಿ

ಬೆಂಗಳೂರು : ಮನೆಗಳ್ಳತನ ಮಾಡುತ್ತಿದ್ದ ಆಟೋಚಾಲಕನನ್ನು ಬಂಡೆಪಾಳ್ಯ ಠಾಣೆ ಬಂಧಿಸಿ 2.25 ಲಕ್ಷ ರೂ. ಮೌಲ್ಯದ ಆಭರಣಗಳನ್ನು ವಶಪಡಿಸಿಕೊಂಡಿದ್ದಾರೆ. ಥಣಿಸಂದ್ರ ಮುಖ್ಯರಸ್ತೆಯ ಫೈಜಾನ್ ಅಹಮ್ಮದ್ (19) ಬಂಧಿತ ಆರೋಪಿ. ಈತನಿಂದ 47 ಗ್ರಾಪಂ ತೂಕದ ಆಭರಣಗಳನ್ನು ವಶಪಡಿಸಿಕೊಂಡಿದ್ದಾರೆ. ಆಟೋ ಚಾಲಕನಾಗಿದ್ದ ಫೈಜಾನ್ ಪ್ರಯಾಣಿಕರನ್ನು ಕರೆದುಕೊಂಡು ಹೋಗಿ ಅವರು ಇಳಿಸಿ ವಾಪಾಸಾಗುವ ಸಂದರ್ಭದಲ್ಲಿ ಬೀಗ ಹಾಕಿದ ಮನೆಗಳನ್ನು ಗಮನಿಸಿ ಕಳ್ಳತನ ಮಾಡುತ್ತಿದ್ದದ್ದು ವಿಚಾರಣೆಯಿಂದ ತಿಳಿದು ಬಂದಿದೆ.

ನಗರದಲ್ಲಿ ಬೀಗ ಹಾಕಿರುವ ಮನೆಗಳನ್ನು ಗುರಿಯಾಗಿರಿಸಿಕೊಂಡು ಕಳ್ಳತನ ಮಾಡುತ್ತಿದ್ದ ಕಳ್ಳನ ಬಗ್ಗೆ ಮಾಹಿತಿ ಸಂಗ್ರಹಿಸಿದ ಬಂಡೆಪಾಳ್ಯ ಠಾಣೆ ಪೊಲೀಸರು ಆರೋಪಿಯ ಜಾಡು ಹಿಡಿದು ಕಾರ್ಯಾಚರಣೆ ನಡೆಸಿ ಆತನನ್ನು ಬಂಧಿಸಿ ಎರಡು ಮನೆಗಳ್ಳತನ ಪ್ರಕರಣವನ್ನು ಭೇದಿಸಿದ್ದಾರೆ. ಆಗ್ನೇಯ ವಿಭಾಗದ ಉಪ ಪೊಲೀಸ್ ಆಯುಕ್ತ ಶ್ರೀನಾಥ್ ಮಹದೇವ್ ಜೋಷಿ ಮಾರ್ಗದರ್ಶನದಲ್ಲಿ ಸಹಾಯಕ ಪೊಲೀಸ್ ಆಯುಕ್ತ ಪವನ್, ಇನ್ಸ್‍ಪೆಕ್ಟರ್ ಯೋಗೇಶ್ ಅವರನ್ನೊಳಗೊಂಡ ತಂಡ ಕಾರ್ಯಾಚರಣೆ ಕೈಗೊಂಡಿತ್ತು.

Facebook Comments