ನಕಲಿ ಪೈಲೆಟ್ ಹಗರಣ : ಪಾಕ್ ವಿಮಾನಗಳಿಗೆ ನಿರ್ಬಂಧ ವಿಧಿಸಿದ ಅಮೆರಿಕ

ಈ ಸುದ್ದಿಯನ್ನು ಶೇರ್ ಮಾಡಿ

ವಾಷಿಂಗ್ಟನ್,ಜು.10- ಭಾರೀ ಚರ್ಚೆಗೆ ಕಾರಣವಾಗಿರುವ ಪಾಕಿಸ್ತಾನದ ನಕಲಿ ಪೈಲೆಟ್ ಹಗರಣವನ್ನು ಗಂಭೀರವಾಗಿ ಪರಿಗಣಿಸಿರುವ ಅಮೆರಿಕ, ಪಾಕಿಸ್ತಾನದ ವಿಮಾನಗಳಿಗೆ ನಿರ್ಬಂಧ ಹೇರಿದ್ದು, ಪ್ರಯಾಣಿಕರ ಹಿತದೃಷ್ಟಿಯಿಂದ ಈ ಕ್ರಮ ಕೈಗೊಂಡಿದ್ದೇವೆ ಎಂದು ಸ್ಪಷ್ಟಪಡಿಸಿದೆ.

ಪಾಕಿಸ್ತಾನದಲ್ಲಿ ಕಾರ್ಯ ನಿರ್ವಹಿಸುತ್ತಿರುವ ಪೈಲೆಟ್‍ಗಳಲ್ಲಿ ಮೂರನೇ ಒಂದು ಭಾಗದಷ್ಟು ಜನರು ಸುಳ್ಳು ದಾಖಲೆ ಸೃಷ್ಟಿಸಿ ಕೆಲಸ ಗಿಟ್ಟಿಸಿಕೊಂಡಿದ್ದಾರೆ ಎನ್ನಲಾಗಿದೆ. ಈ ಬಗ್ಗೆ ಅನೇಕರು ತಪ್ಪುಪ್ಪಿಕೊಂಡಿದ್ದಾರೆ. ಹೀಗಾಗಿ, ಸಂಶಯಾಸ್ಪದ ಪೈಲೆಟ್‍ಗಳನ್ನು ಕೆಲಸದಿಂದ ತೆಗೆದು ಹಾಕಲಾಗಿತ್ತು.

ಈ ವಿಚಾರಕ್ಕೆ ಪ್ರತಿಕ್ರಿಯಿಸಿರುವ ಅಮೆರಿಕದ ಸಾರಿಗೆ ಸಚಿವಾಲಯದ ಅಧಿಕಾರಿಗಳು, ಪ್ರಯಾಣಿಕರ ಹಿತದೃಷ್ಟಿಯಿಂದ ನಾವು ಈ ಕ್ರಮ ಕೈಗೊಂಡಿದ್ದೇವೆ. ಪಾಕಿಸ್ತಾನದಿಂದ ಬರುವ ವಿಮಾನಗಳಿಗೆ ನಿಷೇಧ ಹೇರಿದ್ದೇವೆ ಎಂದು ಹೇಳಿದ್ದಾರೆ.

ಈ ವಿಚಾರವನ್ನು ಪಾಕಿಸ್ತಾನ ಕೂಡ ಖಚಿತಪಡಿಸಿದೆ. ಇನ್ನು, ಯುರೋಪ್ ಒಕ್ಕೂಟ ರಾಷ್ಟ್ರಗಳು ಕೂಡ ಇದೇ ಮಾದರಿಯ ನಿರ್ಧಾರ ತೆಗೆದುಕೊಂಡಿದ್ದು, ಆರು ತಿಂಗಳ ಕಾಲ ಪಾಕಿಸ್ತಾನ ವಿಮಾನಗಳಿಗೆ ನಿಷೇಧ ಹೇರಿವೆ.

ಪಾಕಿಸ್ತಾನದಲ್ಲಿ ಮೇ ತಿಂಗಳಂದು ವಿಮಾನ ಅಪಘಾತವಾಗಿತ್ತು. ಈ ವೇಳೆ 97 ಜನರು ಮೃತಪಟ್ಟಿದ್ದರು. ದೇಶದ 860 ಪೈಲೆಟ್‍ಗಳಲ್ಲಿ 262 ಜನ ಪರೀಕ್ಷೆಯನ್ನೇ ಎದುರಿಸಿಲ್ಲ ಎಂಬ ಆತಂಕಕಾರಿ ವಿಚಾರ ಬೆಳಕಿಗೆ ಬಂದಿತ್ತು. ಇದರಲ್ಲಿ 54 ಪೈಲಟ್‍ಗಳಿಗೆ ಶೋಕಾಸ್ ನೋಟಿಸ್ ನೀಡಲಾಗಿತ್ತು. ಈಗಾಗಲೇ 9 ಜನ ತಪ್ಪುಪ್ಪಿಕೊಂಡಿದ್ದಾರೆ.

Facebook Comments