ಪಿಆರ್‌ಕೆಯಲ್ಲಿ `ಫ್ಯಾಮಿಲಿ ಪ್ಯಾಕ್’

ಈ ಸುದ್ದಿಯನ್ನು ಶೇರ್ ಮಾಡಿ

ಚಂದನವನದಲ್ಲಿ ಬಹಳಷ್ಟು ಯುವ ಪ್ರತಿಭೆಗಳು ತಮ್ಮ ಸಾಮಥ್ರ್ಯವನ್ನು ತೋರಿಸಲು ತುದಿಗಾಲಲ್ಲಿ ನಿಂತಿದ್ದಾರೆ. ಅಂತಹ ಬುದ್ಧಿಜೀವಿ ತಂಡವನ್ನು ಕರೆದು ಸಿನಿಮಾ ಸಾರಥ್ಯವನ್ನು ಪಿಆರ್‍ಕೆ ಸಂಸ್ಥೆ ನೀಡುತ್ತಾ ಬಂದಿದೆ. ಇದರ ಬೆನ್ನೆಲುಬಾಗಿ ಪವರ್ ಸ್ಟಾರ್ ಪುನೀತ್ ರಾಜ್‍ಕುಮಾರ್ ನಿಂತಿದ್ದು , ಯುವ ಪ್ರತಿಭೆಗಳನ್ನು ಪ್ರೋತ್ಸಾಹಿಸುವ ನಿಟ್ಟಿನಲ್ಲಿ ಸಾಗಿದ್ದಾರೆ.
ಈಗಾಗಲೇ ಪಿಆರ್‍ಕೆ ಸಂಸ್ಥೆ ಮೂಲಕ ಹಲವಾರು ಚಿತ್ರಗಳು ನಿರ್ಮಾಣವಾಗಿ ಬಿಡುಗಡೆ ಕಂಡಿದೆ.

ಮತ್ತಷ್ಟು ಚಿತ್ರಗಳು ಚಿತ್ರೀಕರಣದ ಹಂತದಲ್ಲಿದ್ದು , ಈಗ ಆ ಸಾಲಿಗೆ ಮತ್ತೊಂದು ಚಿತ್ರ ಸೇರ್ಪಡೆಗೊಂಡಿದೆ. ಈಗ ಫ್ಯಾಮಿಲಿ ಪ್ಯಾಕ್ ಎಂಬ ಚಿತ್ರ ನಿರ್ಮಾಣವಾಗುತ್ತಿದ್ದು , ಈ ಚಿತ್ರದ ಮೋಷನ್ ಪೋಸ್ಟರ್ ಬಿಡುಗಡೆಯಾಗಿದೆ.

ಅಶ್ವಿನಿ ಪುನೀತ್ ರಾಜಕುಮಾರ್ ಹಾಗೂ ಲಿಖಿತ್ ಶೆಟ್ಟಿ ಈ ಚಿತ್ರದ ನಿರ್ಮಾಪಕರು. ಮನೋರಂಜನೆ ಪ್ರಧಾನವಾಗಿರುವ ಈ ಚಿತ್ರದ ಚಿತ್ರೀಕರಣ ಸದ್ಯದಲ್ಲೇ ಆರಂಭವಾಗಲಿದೆ.
ಈ ಹಿಂದೆ ಸಂಕಷ್ಟ ಕರ ಗಣಪತಿ ಚಿತ್ರವನ್ನು ನಿರ್ದೇಶಿಸಿದ್ದ ಅರ್ಜುನ್ ಕುಮಾರ್.ಎಸ್ ಈ ಚಿತ್ರವನ್ನು ನಿರ್ದೇಶಿಸುತ್ತಿದ್ದಾರೆ. ಸಂಕಷ್ಟಕರ ಗಣಪತಿ ಚಿತ್ರದ ನಾಯಕ ಲಿಖಿತ್ ಶೆಟ್ಟಿ ಈ ಚಿತ್ರದಲ್ಲೂ ನಾಯಕನಾಗಿ ಅಭಿನಯಿಸುತ್ತಿದ್ದಾರೆ.

ಅಮೃತ ಅಯ್ಯಂಗಾರ್ ನಾಯಕಿಯಾಗಿ ನಟಿಸಲಿರುವ ಈ ಚಿತ್ರದ ತಾರಾಬಳಗದಲ್ಲಿ ರಂಗಾಯಣ ರಘು, ಅಚ್ಯುತಕುಮಾರ್, ದತ್ತಣ್ಣ, ತಿಲಕ್, ನಾಗಭೂಷಣ್ ಮುಂತಾದವರಿದ್ದಾರೆ.
ಗುರುಕಿರಣ್ ಈ ಚಿತ್ರಕ್ಕೆ ಸಂಗೀತ ನೀಡುತ್ತಿದ್ದು, ಉದಯಲೀಲ ಅವರ ಛಾಯಾಗ್ರಹಣವಿದೆ.

ಮಾಸ್ತಿ ಫ್ಯಾಮಿಲಿ ಪ್ಯಾಕ್ ಗೆ ಸಂಭಾಷಣೆ ಬರೆಯುತ್ತಿದ್ದಾರೆ. ಲಾಕ್‍ಡೌನ್ ಮುಕ್ತಗೊಂಡು ಚಿತ್ರ ಚಟುವಟಿಕೆಗಳು ಆರಂಭಗೊಳ್ಳುತ್ತಿದ್ದಂತೆ ಹೆಚ್ಚಿನ ಮಾಹಿತಿಯನ್ನು ತಂಡ ನೀಡಲಿದೆಯಂತೆ.

Facebook Comments