ಸಾಲ ತೀರಿಸಲಾಗದೆ ನೇಣು ಬಿಗಿದುಕೊಂಡು ರೈತ ಆತ್ಮಹತ್ಯೆ

ಈ ಸುದ್ದಿಯನ್ನು ಶೇರ್ ಮಾಡಿ

ಚಿಕ್ಕಮಗಳೂರು, ಮೇ 27- ಬೇಸಾಯ ಮಾಡಲು ಸಾಲ ಪಡೆದಿದ್ದ ರೈತ ಸಾಲ ತೀರಿಸಲಾಗದೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಹರಿಹರಪುರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ಕೊಪ್ಪ ತಾಲೂಕಿನ ನಿಲುವಾಗಿಲು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕೃಷಿಕ ಬೆಳ್ಳಪ್ಪನಾಯಕ (65) ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಬೆಲ್ಲಪ್ಪ ಅವರು ಕೊಪ್ಪ ಪಿಸಿಎಲ್ ಡಿ ಬ್ಯಾಂಕ್, ನಿಲುವಾಗಿಲು ಸೊಸೈಟಿ, ಧರ್ಮಸ್ಥಳ ಸ್ವಸಹಾಯ ಸಂಘಗಳಿಂದ ಒಟ್ಟು 4.5 ಲಕ್ಷದಷ್ಟು ಸಾಲ ಮಾಡಿಕೊಂಡಿದ್ದರು. ಅದೇ ಕೊರಗಿನಲ್ಲಿ ಅನಾರೋಗ್ಯಕ್ಕೆ ತುತ್ತಾಗಿದ್ದರು ಎಂದು ಕುಟುಂಬದ ಮೂಲಗಳು ತಿಳಿಸಿವೆ. ಮೃತರಿಗೆ ಪತ್ನಿ, ಪುತ್ರ, ಪುತ್ರಿ ಇದ್ದಾರೆ.

ಹರಿಹರಪುರ ಪೊಲೀಸ್ ಠಾಣೆಯಲ್ಲಿ ಈ ಸಂಬಂಧ ಪ್ರಕರಣ ದಾಖಲಾಗಿದೆ. ಮೃತರ ಮನೆಗೆ ಶೃಂಗೇರಿ ಕ್ಷೇತ್ರದ ಶಾಸಕ ಟಿ. ಡಿ. ರಾಜೇಗೌಡ, ಹರಿಹರಪುರ ಕಂದಾಯ ನಿರೀಕ್ಷಕ ಸುಧೀರ್ ಭೇಟಿ ನೀಡಿ ಕುಟುಂಬದವರಿಗೆ ಸಾತ್ವನ ಹೇಳಿದ್ದಾರೆ.

Facebook Comments