ಸಾಲ ತೀರಿಸಲಾಗದೆ ರೈತ ಆತ್ಮಹತ್ಯೆ

ಈ ಸುದ್ದಿಯನ್ನು ಶೇರ್ ಮಾಡಿ

farmers suicideಗುಬ್ಬಿ, ಡಿ.12-ಕೃಷಿಗಾಗಿಯೇ ಮಾಡಿದ್ದ ಸಾಲ ತೀರಿಸಲಾಗದೆ ರೈತ ತನ್ನ ಜಮೀನನಲ್ಲಿ ದ್ವಿಚಕ್ರವಾಹನದ ಮೇಲೆ ನಿಂತು ಮರಕ್ಕೆ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿರುವ ಘಟನೆ ತಾಲ್ಲೂಕಿನ ಮಾದಾಪುರ ಗ್ರಾಮದಲ್ಲಿ ನಡೆದಿದೆ. ಮಂಜುನಾಥ(45)ಆತ್ಮಹತ್ಯೆ ಮಾಡಿಕೊಂಡ ರೈತ.
ತಾಲ್ಲೂಕಿನ ಬಿದರೆ ಕಲ್ಪತರು ಗ್ರಾಮೀಣ ಬ್ಯಾಂಕ್‍ನಲ್ಲಿ ಕೃಷಿಗಾಗಿ ಹಾಗೂ ಹಸು ತೆಗೆದುಕೊಳ್ಳಲು ಸಾಲ ಪಡೆದಿದ್ದ ಎನ್ನಲಾಗಿದ್ದು, ಅಲ್ಲದೆ ಕೈ ಸಾಲ ಸಹ ಮಾಡಿದ್ದರೆಂದು ತಿಳಿದು ಬಂದಿದೆ.

ಜಮೀನಿನಲ್ಲಿ ಕೊರೆದ ಕೊಳವೆ ಬಾವಿಯಲ್ಲಿ ನೀರು ಬಾರದೆ, ಕೃಷಿಗಾಗಿ ಮಾಡಿದ ಸಾಲ ತೀರಿಸುವುದು ಹೇಗೆ ಎಂಬ ಆತಂಕದಲ್ಲಿ ಮನನೊಂದು ಅತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಕುಟುಂಬ ಮೂಲಗಳು ತಿಳಿಸಿವೆ. ಗುಬ್ಬಿ ಪೋಲಿಸ್ ಠಾಣೆಯಲ್ಲಿ ಪ್ರಕರಣ ದಾಖಲು ಮಾಡಲಾಗಿದೆ.

Facebook Comments