ಜೂನ್ ವೇಳೆಗೆ ಸಂಪೂರ್ಣ ರೈತರ ಸಾಲ ಮನ್ನಾ

ಈ ಸುದ್ದಿಯನ್ನು ಶೇರ್ ಮಾಡಿ

ಬೆಂಗಳೂರು, ಏ.26-ಸಹಕಾರಿ ಬ್ಯಾಂಕ್‍ಗಳಲ್ಲಿ ರಾಜ್ಯದ ರೈತರು ಮಾಡಿರುವ ಸಾಲ ಜೂನ್ ವೇಳೆಗೆ ಸಂಪೂರ್ಣವಾಗಿ ಮನ್ನಾ ಆಗಲಿದೆ ಎಂದು ಸಹಕಾರ ಸಚಿವ ಬಂಡೆಪ್ಪ ಕಾಶಂಪುರ್ ತಿಳಿಸಿದರು.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಲೋಕಸಭಾ ಚುನಾವಣಾ ನೀತಿ ಸಂಹಿತೆ ಜಾರಿಯಾಗುವ ಮುನ್ನ ಸಹಕಾರಿ ಬ್ಯಾಂಕ್‍ಗಳಿಗೆ 2,600 ಕೋಟಿ ರೂ. ಬಿಡುಗಡೆ ಮಾಡಲಾಗಿತ್ತು.

ಅದರಲ್ಲಿ 2 ಸಾವಿರ ಕೋಟಿ ರೂ. ರೈತರ ಖಾತೆಗಳಿಗೆ ಜಮಾ ಆಗಿದೆ. ಹಾಗೆಯೇ ವಾಣಿಜ್ಯ ಬ್ಯಾಂಕುಗಳಲ್ಲಿನ ರೈತರ ಸಾಲಕ್ಕೆ ಸಂಬಂಧಿಸಿದಂತೆ 2,800 ಕೋಟಿ ರೂ. ರೈತರ ಖಾತೆಗಳಿಗೆ ವರ್ಗಾವಣೆ ಮಾಡಲಾಗಿದೆ. ಹೀಗಾಗಿ ರೈತರ ಸಾಲ ಮನ್ನಾ ವಿಚಾರದಲ್ಲಿ ಯಾರೂ ಕೂಡ ಹಗುರವಾಗಿ ಮಾತನಾಡಬಾರದು. ಸರಿಯಾದ ಅಂಕಿಅಂಶಗಳ ಮಾಹಿತಿ ಪಡೆದು ಮಾತನಾಡಬೇಕು ಎಂದು ನಟಿ ಸುಮಲತಾ ಅವರ ಹೇಳಿಕೆಗೆ ತಿರುಗೇಟು ನೀಡಿದರು.

ನಾವು ಸರ್ಕಾರ ನಡೆಸುತ್ತಿದ್ದು, ಸಾಲ ಮನ್ನಾ ವಿಚಾರದ ಬಗ್ಗೆ ನಮಗೆ ಮಾಹಿತಿ ಇಲ್ಲವೇ? ಎಂದು ಪ್ರಶ್ನಿಸಿದ ಅವರು, ಆಧಾರರಹಿತವಾಗಿ ಯಾರೇ ಆದರೂ ಆರೋಪ ಮಾಡಬಾರದು ಎಂದರು.

Facebook Comments

( ಎಚ್ಚರಿಕೆ..! : ಈ ಸಂಜೆ ಸುದ್ದಿಗಳನ್ನು ನಕಲು ಮಾಡುವವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗುತ್ತಿದೆ ) > #ವಾಟ್ಸಾಪ್‌ನಲ್ಲಿ ಸುದ್ದಿಗಳನ್ನು ಪಡೆಯಲು 7795582478 ಸಂಖ್ಯೆಯನ್ನು ನಿಮ್ಮ ಮೊಬೈಲ್ ನಲ್ಲಿ SAVE ಮಾಡಿಕೊಂಡು HI EESANJE ಎಂದು ಸಂದೇಶ ಕಳಿಸಿ

One thought on “ಜೂನ್ ವೇಳೆಗೆ ಸಂಪೂರ್ಣ ರೈತರ ಸಾಲ ಮನ್ನಾ

Comments are closed.