7ನೆ ದಿನಕ್ಕೆ ಕಾಲಿಟ್ಟ ಪ್ರತಿಭಟನೆ, ನೋಯ್ಡಾ ಗಡಿಯಲ್ಲಿ ರೈತರ ಜಮಾವಣೆ

ಈ ಸುದ್ದಿಯನ್ನು ಶೇರ್ ಮಾಡಿ

ನವದೆಹಲಿ, ಡಿ.2-ಕೇಂದ್ರ ಸರ್ಕಾರದ ಕೃಷಿ ನೀತಿ ವಿರೋಧಿಸಿ ರೈತರು ನಡೆಸುತ್ತಿರುವ ಪ್ರತಿಭಟನೆ 7ನೆ ದಿನಕ್ಕೆ ಕಾಲಿಟ್ಟಿದ್ದು, ಇಂದು ರೈತರು ನೋಯ್ಡಾ-ಉತ್ತರ ಪ್ರದೇಶ ಗಡಿ ಭಾಗದಲ್ಲಿ ಧರಣಿ ನಡೆಸುತ್ತಿರುವುದರಿಂದ ದೆಹಲಿಯಲ್ಲಿ ಭಾರಿ ವಾಹನ ದಟ್ಟಣೆ ಉಂಟಾಗಿದೆ.

ರೈತ ಮುಖಂಡರು ಮತ್ತು ಸರ್ಕಾರದ ನಡುವಿನ ಮಾತುಕತೆ ಮುರಿದು ಬೀಳುತ್ತಿದ್ದಂತೆ ರೈತರು ತಮ್ಮ ಹೋರಾಟ ಮುಂದುವರೆಸಿದ್ದು, ನೋಯ್ಡಾದಲ್ಲಿ ಪ್ರತಿಭಟನೆ ನಡೆಸುತ್ತಿರುವುದರಿಂದ ಉತ್ತರಪ್ರದೇಶ ಸಂಪರ್ಕಿಸುವ ಪ್ರಮುಖ ರಸ್ತೆ ಬಂದ್ ಆಗಿದೆ.

ಪಂಜಾಬ್ ಮತ್ತು ಹರಿಯಾಣ ರೈತರು ಕರೆ ನೀಡಿರುವ ಬೃಹತ್ ರ್ಯಾಲಿಗೆ ಉತ್ತರಪ್ರದೇಶದಿಂದ ಭಾರಿ ಸಂಖ್ಯೆ ರೈತರು ಆಗಮಿಸುವ ಸಾಧ್ಯತೆ ಇರುವುದರಿಂದ ಪೊಲೀಸರು ಉತ್ತರಪ್ರದೇಶ ಮಾರ್ಗವನ್ನು ಬಂದ್ ಮಾಡಿ ವಾಹನ ಸವಾರರಿಗೆ ಪರ್ಯಾಯ ಮಾರ್ಗ ಬಳಸುವಂತೆ ಸೂಚನೆ ನೀಡುತ್ತಿದ್ದಾರೆ.

ಗಡಿಭಾಗದಲ್ಲಿ ಸಹಸ್ರಾರು ರೈತರು ಸಮಾವೇಶಗೊಳ್ಳುತ್ತಿರುವುದರಿಂದ ನೊಯ್ಡಾ ಮತ್ತು ದೆಹಲಿಯಲ್ಲಿ ಕಟ್ಟೇಚ್ಚರವಹಿಸುವಂತೆ ಪೊಲೀಸರಿಗೆ ಸೂಚಿಸಲಾಗಿದೆ.

Facebook Comments