ಅಮಿತ್ ಷಾ ಆಗಮನಕ್ಕೆ ವಿರೋಧಿಸಿ ಪ್ರತಿಭಟನೆ, ರೈತರು ವಶಕ್ಕೆ

ಈ ಸುದ್ದಿಯನ್ನು ಶೇರ್ ಮಾಡಿ

ಬೆಳಗಾವಿ, ಜ.17- ನಗರದಲ್ಲಿ ಆಯೋಜಿಸಲಾಗಿದ್ದ ಜನಸೇವಕ ಸಮಾವೇಶಕ್ಕೆ ಆಗಮಿಸಿದ ಕೇಂದ್ರ ಗೃಹ ಸಚಿವ ಅಮಿತ್ ಷಾ ವಿರುದ್ಧ ಬೆಳಗ್ಗೆಯಿಂದ ಪ್ರತಿಭಟನೆ ನಡೆಸುತ್ತಿದ್ದ ರೈತರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಕೇಂದ್ರ ಸರ್ಕಾರ ಜಾರಿಗೆ ತಂದಿರುವ ಕೃಷಿ ಕಾಯ್ದೆ ತಿದ್ದುಪಡಿ ಮಸೂದೆ ಖಂಡಿಸಿ ಪ್ರತಿಭಟಿಸುತ್ತಿರುವ ರೈತರನ್ನು ಪರಿಗಣಿಸದ ಅಮಿತ್ ಶಾ ಅವರ ಬೆಳಗಾವಿ ಆಗಮನವನ್ನು ವಿರೋಧಿಸಿ ರೈತರು ಬೆಳಿಗ್ಗೆ ನಗರದ ಚನ್ನಮ್ಮ ವೃತ್ತದಿಂದ ಜಿಲ್ಲಾಧಿಕಾರಿ ಕಚೇರಿವರೆಗೆ ಅರೆ ಬೆತ್ತಲೆ ಉರುಳು ಸೇವೆ ಮಾಡಿ ಗಾಂಧೀಜಿ ಭಾವಚಿತ್ರ ಇಟ್ಟುಕೊಂಡು ರಸ್ತೆ ತಡೆ ನಡೆಸುತ್ತಿದ್ದರು.

ಅವರ ಮನವೊಲಿಕೆಗೆ ಮುಂದಾದ ಪೊಲೀಸರ ಮಾತು ಕೇಳದೆ ರೈತರು ಪ್ರತಿಭಟನೆ ಮುಂದುವರೆಸಿದ್ದರು. ಬಳಿಕ ಮಾರ್ಕೆಟ್ ಠಾಣೆಯ ಪೊಲೀಸರು ರೈತರನ್ನು ವಶಕ್ಕೆ ಪಡೆದಿದ್ದಾರೆ.

Facebook Comments