ಕಾರು-ಸ್ಕೂಟರ್ ನಡುವೆ ಅಪಘಾತ, ಸ್ಥಳದಲ್ಲೇ ತಂದೆ-ಮಗಳು ಸಾವು

ಈ ಸುದ್ದಿಯನ್ನು ಶೇರ್ ಮಾಡಿ

ಹಾಸನ,ಆ.30- ದ್ವಿಚಕ್ರ ವಾಹನ ಹಾಗೂ ಕಾರಿನ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ತಂದೆ-ಮಗಳು ಸ್ಥಳದಲ್ಲೇ ಸಾವನ್ನಪ್ಪಿರುವ ಹೃದಯ ವಿದ್ರಾವಕ ಘಟನೆ ಚನ್ನರಾಯಪಟ್ಟಣ ತಾಲ್ಲೂಕಿನ ಜೋಡಿಗಟ್ಟೆ ಬಳಿ ನಡೆದಿದೆ.

ಡಿಕರಡೆವು ಗ್ರಾಮದ ಧರಣಿ (32) ಹಾಗೂ ಇವರ ಐದು ವರ್ಷದ ಮಗಳು ಅಪಘಾತದಲ್ಲಿ ಮೃತಪಟ್ಟಿದ್ದಾರೆ.ಡಿಕರಡೆವು ಗ್ರಾಮದಿಂದ ಚನ್ನರಾಯಪಟ್ಟಣಕ್ಕೆ ದ್ವಿಚಕ್ರ ವಾಹನದಲ್ಲಿ ತೆರಳುತ್ತಿದ್ದು, ರಾಷ್ಟ್ರೀಯ ಹೆದ್ದಾರಿ 75ರ ಜೋಡಿಗಟ್ಟೆ ಗ್ರಾಮದ ಬಳಿ ತಿರುವು ಪಡೆದುಕೊಳ್ಳುವಾಗ ಬೆಂಗಳೂರಿನಿಂದ ಮಂಗಳೂರು ಕಡೆಗೆ ತೆರಳುತ್ತಿದ್ದ ಕಾರು ಡಿಕ್ಕಿ ಹೊಡೆದಿದೆ.

ಡಿಕ್ಕಿ ಹೊಡೆದ ರಭಸಕ್ಕೆ ತಂದೆ-ಮಗಳಿಗೆ ಗಂಭೀರ ಗಾಯಗಳಾಗಿ ಸ್ಥಳದಲ್ಲೇ ಮೃತಪಟ್ಟಿದ್ದಾರೆ.ಕಾರಿನಲ್ಲಿದ್ದವರಿಗೆ ಸಣ್ಣಪುಟ್ಟಗಾಯಗಳಾಗಿದ್ದು, ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಗ್ರಾಮಾಂತರ ಠಾಣೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Facebook Comments

Sri Raghav

Admin