ನೀರಿನಲ್ಲಿ ಮುಳುಗಿ ಮೃತಪಟ್ಟಿದ್ದ ಅಪ್ಪ-ಮಗನ ಶವ ಪತ್ತೆ

ಈ ಸುದ್ದಿಯನ್ನು ಶೇರ್ ಮಾಡಿ

Suicide-Water-02
ಬೆಂಗಳೂರು, ಜೂ.19- ಕೆರೆಯಲ್ಲಿ ಈಜಲು ಹೋಗಿದ್ದ ಅಪ್ಪ-ಮಗ ಉಸಿರುಗಟ್ಟಿ ಮೃತಪಟ್ಟಿದ್ದು, ಇಂದು ಬೆಳಗ್ಗೆ ಇವರಿಬ್ಬರ ಶವಗಳು ಪತ್ತೆಯಾಗಿವೆ. ವೃತ್ತಿಯಲ್ಲಿ ಕಾರ್ಪೆಂಟರ್ ಆಗಿದ್ದ ಮೂಲತಃ ಉತ್ತರ ಪ್ರದೇಶದ ಜಿತೇಂದ್ರಶರ್ಮ (38) ಮತ್ತು ಮೂರನೆ ತರಗತಿ ವ್ಯಾಸಂಗ ಮಾಡುತ್ತಿದ್ದ ಮಗ ಲವಕುಶ ಆಲಿಯಾಸ್ ಬಾಬು (8) ಮೃತಪಟ್ಟ ದುರ್ದೈವಿಗಳು.

ಬಾಗಲೂರು ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ವಾಸವಾಗಿದ್ದ ಇವರು ನಿನ್ನೆ ಮಗನನ್ನು ಕರೆದುಕೊಂಡು ಬಿಕೆ ಹಳ್ಳಿ ಕೆರೆಯಲ್ಲಿ ಈಜಲು ತೆರಳಿದ್ದರು. ಈ ವೇಳೆ ಇವರಿಬ್ಬರು ಉಸಿರುಗಟ್ಟಿ ಮೃತಪಟ್ಟಿದ್ದಾರೆ.ಸುದ್ದಿ ತಿಳಿದ ಪೊಲೀಸರು ಸ್ಥಳೀಯರ ನೆರವಿನೊಂದಿಗೆ ಶವಗಳಿಗಾಗಿ ಹುಡುಕಾಟ ನಡೆಸಿದ್ದು, ಇಂದು ಬೆಳಗ್ಗೆ ಇವರಿಬ್ಬರ ಶವಗಳು ಪತ್ತೆಯಾಗಿವೆ. ಅಂಬೇಡ್ಕರ್ ಆಸ್ಪತ್ರೆಯಲ್ಲಿ ಶವಗಳನ್ನು ಇಡಲಾಗಿದೆ. ಈ ಬಗ್ಗೆ ಬಾಗಲೂರು ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Facebook Comments

Sri Raghav

Admin