ಎಫ್‌ಸಿಐನಲ್ಲಿ 330 ಮ್ಯಾನೇಜರ್ ಹುದ್ದೆಗಳ ನೇಮಕಾತಿ

ಈ ಸುದ್ದಿಯನ್ನು ಶೇರ್ ಮಾಡಿ

ಫುಡ್ ಕಾರ್ಪೊರೇಷನ್ ಆಫ್ ಇಂಡಿಯಾದಲ್ಲಿ (ಎಫ್‌ಸಿಐ) 330 ವಿವಿಧ ಹುದ್ದೆಗಳಿಗೆ(ಮ್ಯಾನೇಜರ್) ನೇಮಕಾತಿಗಾಗಿ ಐಬಿಪಿಎಸ್ ನೇಮಕಾತಿ 2019 ಪ್ರಕಟಣೆ ಅಧಿಕೃತ ವೆಬ್ ಸೈಟ್ ನಲ್ಲಿ ಬಿಡುಗಡೆಯಾಗಿದೆ. 28.09.2019 ಅರ್ಜಿ ಸಲ್ಲಿಸಲು ಆರಂಭದ ದಿನಾಂಕವಾಗಿದ್ದು. 27.10.2019ರ ವರೆಗೆ ಅರ್ಜಿ ಸಲ್ಲಿಸಲು ಅವಕಾಶವಿರುತ್ತದೆ.

ಫುಡ್ ಕಾರ್ಪೊರೇಷನ್ ಆಫ್ ಇಂಡಿಯಾದಲ್ಲಿ (ಎಫ್‌ಸಿಐ) 330 ವಿವಿಧ ಹುದ್ದೆಗಳಿಗೆ (ಮ್ಯಾನೇಜರ್) ಅರ್ಜಿ ಸಲ್ಲಿಸಲು ಮಾನ್ಯತೆ ಪಡೆದ ಪಡೆದ ವಿಶ್ವವಿದ್ಯಾಲಯದಿಂದ ಯಾವುದೇ ವಿಭಾಗದಲ್ಲಿ ಪದವಿ, ಸಿಎ, ಐಸಿಡಬ್ಲ್ಯೂಎ, ಸಿಎಸ್, ಬಿಇ / ಬಿಟೆಕ್, ಸ್ನಾತಕೋತ್ತರ ಪದವಿ ಅಥವಾ ಅದರ ಸಮಾನವಾದ ಪರೀಕ್ಷೆಯಲ್ಲಿ ಉತ್ತೀರ್ಣರಾಗಿರಬೇಕು ಸಂಬಂಧಿತ ನೀಡಲಾದ ಪ್ರಮಾಣಪತ್ರ.

ವಯಸ್ಸಿನ ಮಿತಿ: ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು 20 ರಿಂದ 30 ವರ್ಷಗಳು. ಇನ್ನು ಅರ್ಜಿದಾರರು ಅರ್ಜಿ ಶುಲ್ಕವನ್ನು ಪಾವತಿಸಬೇಕಿರುತ್ತದೆ. ಸಾಮಾನ್ಯ / ಓಬಿಸಿ ಅಭ್ಯರ್ಥಿಗಳು 800/-ರೂ ಮತ್ತು ಪರಿಶಿಷ್ಟ ಜಾತಿ / ಪರಿಶಿಷ್ಟ ಪಂಗಡ / ಅಂಗವಿಕಲ ಮತ್ತು ಮಹಿಳಾ ಅಭ್ಯರ್ಥಿಗಳು ವಿನಾಯಿತಿ ಶುಲ್ಕ ಅರ್ಜಿ ಶುಲ್ಕವನ್ನು ಆನ್ಲೈನ್ಮೂಲಕ ಪಾವತಿಸಬಹುದು.

ಆಯ್ಕೆ ಪ್ರಕ್ರಿಯೆ: ಆನ್ಲೈನ್ ಪ್ರಾಥಮಿಕ ಪರೀಕ್ಷೆ, ಆನ್ಲೈನ್ ಮುಖ್ಯ ಪರೀಕ್ಷೆಯ ಆಧಾರದ ಮೇಲೆ ಆಯ್ಕೆ ಇರುತ್ತದೆ.

Facebook Comments

( ಎಚ್ಚರಿಕೆ..! : ಈ ಸಂಜೆ ಸುದ್ದಿಗಳನ್ನು ನಕಲು ಮಾಡುವವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗುತ್ತಿದೆ ) > #ವಾಟ್ಸಾಪ್‌ನಲ್ಲಿ ಸುದ್ದಿಗಳನ್ನು ಪಡೆಯಲು 7795582478 ಸಂಖ್ಯೆಯನ್ನು ನಿಮ್ಮ ಮೊಬೈಲ್ ನಲ್ಲಿ SAVE ಮಾಡಿಕೊಂಡು HI EESANJE ಎಂದು ಸಂದೇಶ ಕಳಿಸಿ