ಎಫ್‍ಡಿಎ ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣದಲ್ಲಿ ಈವರೆಗೆ 23 ಮಂದಿ ಬಂಧನ

ಈ ಸುದ್ದಿಯನ್ನು ಶೇರ್ ಮಾಡಿ

ಬೆಂಗಳೂರು,ಜ.28- ಎಫ್‍ಡಿಎ ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಸಿಬಿ ಪೊಲೀಸರು ಈವರೆಗೆ 23 ಮಂದಿ ಆರೋಪಿಗಳನ್ನು ಬಂಧಿಸಿದ್ದಾರೆ. ಈ ಪ್ರಕರಣದಲ್ಲಿ ಇನ್ನಷ್ಟು ಮಂದಿ ಆರೋಪಿಗಳು ಭಾಗಿಯಾಗಿದ್ದು ಮೊಬೈಲ್‍ಗಳನ್ನು ಸ್ವಿಚ್ ಆಫ್ ಮಾಡಿಕೊಂಡು ತಲೆಮರೆಸಿಕೊಂಡಿದ್ದಾರೆ ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ಈಸಂಜೆಗೆ ತಿಳಿಸಿದ್ದಾರೆ.

ಸಿಸಿಬಿ ಪೊಲೀಸರ ತಂಡಗಳು ಇಡೀ ರಾಜ್ಯದಲ್ಲಿ ಕಾರ್ಯಾಚರಣೆ ನಡೆಸಿ ತಲೆಮರೆಸಿಕೊಂಡಿರುವ ಆರೋಪಿಗಳನ್ನು ಆದಷ್ಟೂ ಬೇಗ ಬಂಧಿಸಲಿವೆ ಎಂದು ಅವರು ಹೇಳಿದರು. ಕೆಪಿಎಸ್‍ಸಿಯ ಮೂವರು ಸಿಬ್ಬಂದಿಗಳು, ಒಬ್ಬರು ಪೊಲೀಸ್ ಕಾನ್ಸ್‍ಟೇಬಲ್, ಒಬ್ಬರು ಆರ್‍ಟಿಓ ಅಧಿಕಾರಿಯನ್ನು ಈಗಾಗಲೇ ಸಿಸಿಬಿ ಪೊಲೀಸರು ಬಂಧಿಸಿದ್ದಾರೆ.

ಎಫ್‍ಡಿಎ ಪರೀಕ್ಷೆ ತೆಗೆದುಕೊಂಡು ಸೋರಿಕೆಯಾದ ಪ್ರಶ್ನೆ ಪತ್ರಿಕೆಯನ್ನು ಹಣ ಕೊಟ್ಟು ಪಡೆದುಕೊಂಡಿದ್ದ ಅಭ್ಯರ್ಥಿಗಳನ್ನು ಸಹ ಬಂಧಿಸಲಾಗಿದೆ ಎಂದು ಅವರು ತಿಳಿಸಿದರು.

Facebook Comments