ಬೆಂಗಳೂರುನಲ್ಲಿ ಹೊಸ 50 ಫೀವರ್ ಕ್ಲಿನಿಕ್‍

ಈ ಸುದ್ದಿಯನ್ನು ಶೇರ್ ಮಾಡಿ

ಬೆಂಗಳೂರು, ಏ.10- ನಗರದಲ್ಲಿ ದಿನೇ ದಿನೇ ಕೊರೊನಾ ಸೋಂಕಿತರ ಸಂಖ್ಯೆ ಹೆಚ್ಚುತ್ತಿರುವುದನ್ನು ಗಂಭೀರವಾಗಿ ಪರಿಗಣಿಸಿರುವ ಆರೋಗ್ಯ ಇಲಾಖೆ ಮತ್ತೆ ಹೊಸ 50 ಫೀವರ್ ಕ್ಲಿನಿಕ್‍ಗಳನ್ನು ತೆರೆಯಲು ತೀರ್ಮಾನಿಸಿದೆ.

ನಗರದಲ್ಲಿ ಪ್ರಸ್ತುತ 31 ಫೀವರ್ ಕ್ಲಿನಿಕ್‍ಗಳು ಕಾರ್ಯನಿರ್ವಹಣೆ ಮಾಡುತ್ತಿದ್ದು, ಹೆಚ್ಚುವರಿಯಾಗಿ 50 ಫೀವರ್ ಕ್ಲಿನಿಕ್‍ಗಳನ್ನು ತೆರೆಯಲಾಗುತ್ತಿದೆ.  ನಗರದಲ್ಲಿ ದಿನೇ ದಿನೇ ಕೊರೊನಾ ಸೋಂಕಿತರ ಸಂಖ್ಯೆ ಹೆಚ್ಚಾಗುತ್ತಿರುವುದನ್ನು ಗಂಭೀರವಾಗಿ ಪರಿಗಣಿಸಿ 50 ಹೆಚ್ಚುವರಿ ಫೀವರ್ ಕ್ಲಿನಿಕ್‍ಗಳನ್ನು ತೆರೆಯುವಂತೆ ಆರೋಗ್ಯ ಇಲಾಖೆ ಆಯುಕ್ತ ಪಂಕಜ್‍ಕುಮಾರ್ ಪಾಂಡೆ ಆದೇಶ ಹೊರಡಿಸಿದ್ದಾರೆ.

Facebook Comments