ಚಾಲೆಂಜಿಂಗ್ ಸ್ಟಾರ್ ದರ್ಶನ್ ಅಭಿಮಾನಿಗಳ ವಿರುದ್ಧ ಎಫ್‍ಐಆರ್

ಈ ಸುದ್ದಿಯನ್ನು ಶೇರ್ ಮಾಡಿ

ಬೆಂಗಳೂರು,ಫೆ.18- ಕರ್ತವ್ಯನಿರತ ಕಾನ್‍ಸ್ಟೆಬಲ್ ಮೇಲೆ ಹಲ್ಲೆ ನಡೆಸಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ನಟ ದರ್ಶನ್ ಅಭಿಮಾನಿಗಳ ವಿರುದ್ಧ ರಾಜರಾಜೇಶ್ವರಿನಗರ ಠಾಣೆಯಲ್ಲಿ ಎಫ್‍ಐಆರ್ ದಾಖಲಾಗಿದೆ.ಹಲ್ಲೆಯಿಂದ ಗಂಭೀರ ಗಾಯಗೊಂಡಿರುವ ಜ್ಞಾನಭಾರತಿ ಪೊಲೀಸ್ ಠಾಣೆಯ ಕಾನ್‍ಸ್ಟೆಬಲ್ ದೇವರಾಜ(26) ನಗರದ ಎಸ್‍ಎಸ್‍ಎನ್‍ಎಂಸಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ನಟ ದರ್ಶನ್ ಅವರ ಹುಟ್ಟಹಬ್ಬದ ಅಂಗವಾಗಿ ಆರ್‍ಆರ್‍ನಗರ ವ್ಯಾಪ್ತಿಯ ಐಡಿಯಲ್ ಹೋಮ್ಸ್‍ನಲ್ಲಿರುವ ದರ್ಶನ್ ಅವರ ಮನೆ ಬಳಿ ರಾತ್ರಿ 8 ಗಂಟೆಯಲ್ಲಿ ಬಂದೋಬಸ್ತ್ ಕರ್ತವ್ಯಕ್ಕೆ ಕಾನ್‍ಸ್ಟೆಬಲ್ ದೇವರಾಜ್ ನಿಯೋಜನೆಗೊಂಡಿದ್ದರು.

ಮಧ್ಯರಾತ್ರಿ 12.30ರ ಸುಮಾರಿನಲ್ಲಿ ನೂರಾರು ಸಂಖ್ಯೆಯಲ್ಲಿ ದರ್ಶನ್ ಅಭಿಮಾನಿಗಳು ಸೇರಿದ್ದರಿಂದ ನೂಕುನುಗ್ಗಲು ಉಂಟಾಗಿತ್ತು. ಆ ಸಂದರ್ಭದಲ್ಲಿ ಅಭಿಮಾನಿಗಳನ್ನು ನಿಯಂತ್ರಿಸಲು ಮುಂದಾದ ಕಾನ್‍ಸ್ಟೆಬಲ್ ದೇವರಾಜ್ ಅವರ ಕರ್ತವ್ಯಕ್ಕೆ ಅಡ್ಡಿಪಡಿಸಿದ ಕೆಲ ಅಭಿಮಾನಿಗಳು ಏಕಾಏಕಿ ಇವರ ಮೂಗು ಹಾಗೂ ಕಣ್ಣಿಗೆ ಹೊಡೆದಿದ್ದರಿಂದ ಅತಿಯಾದ ರಕ್ತಸ್ರಾವವಾಗಿ ಗಂಭೀರ ಗಾಯಗೊಂಡಿದ್ದಾರೆ.

ತಕ್ಷಣ ಇವರನ್ನು ಆಸ್ಪತ್ರೆಗೆ ಚಿಕಿತ್ಸೆಗೆ ದಾಖಲಿಸಲಾಗಿದ್ದು, ಚೇತರಿಸಿಕೊಳ್ಳುತ್ತಿದ್ದಾರೆ. ಘಟನೆ ಸಂಬಂಧ ಕಾನ್‍ಸ್ಟೆಬಲ್ ದೇವರಾಜ್ ಅವರು ನೀಡಿದ ದೂರಿನನ್ವಯ ಆರ್‍ಆರ್ ನಗರ ಠಾಣೆ ಪೆÇಲೀಸರು ದರ್ಶನ್ ಅಭಿಮಾನಿಗಳ ವಿರುದ್ಧ ಎಫ್‍ಐಆರ್ ದಾಖಲಿಸಿಕೊಂಡು ಮುಂದಿನ ಕ್ರಮ ಕೈಗೊಂಡಿದ್ದಾರೆ.

Facebook Comments

Sri Raghav

Admin