ಕರ್ತವ್ಯಕ್ಕೆ ಅಡ್ಡಿಪಡಿಸಿದ ಆರೋಪ : ಶಾಸಕರ ವಿರುದ್ದ ಎಫ್‍ಐಆರ್

ಈ ಸುದ್ದಿಯನ್ನು ಶೇರ್ ಮಾಡಿ

ಮೈಸೂರು,ಡಿ.6-ಹುಣಸೂರು ಉಪಚುನಾವಣೆ ಸಂದರ್ಭದಲ್ಲಿ ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ ಆರೋಪದಡಿ ಶಾಸಕ ಅನಿಲ್ ಚಿಕ್ಕಮಾಧು ವಿರುದ್ಧ ಪೊಲೀಸರು ದೂರು ದಾಖಲಿಸಿಕೊಂಡಿದ್ದಾರೆ.  ಶಾಸಕ ಅನಿಲ್ ಚಿಕ್ಕಮಾದು ಹಾಗೂ ಗ್ರಾಮಾಂತರ ಕಾಂಗ್ರೆಸ್ ಅಧ್ಯಕ್ಷ ಡಾ.ಬಿ.ಜೆ.ವಿಜಯಕುಮಾರ್ ವಿರುದ್ಧ ಎಫ್‍ಐಆರ್ ದಾಖಲಿಸಲಾಗಿದೆ.

ಅನಿಲ್ ಚಿಕ್ಕಮಾಧುವಿನೊಂದಿಗೆ ಪೊಲೀಸರು ಅನುಚಿತವಾಗಿ ವರ್ತಿಸಿದ್ದಾರೆಂಬ ಆರೋಪದ ಹಿನ್ನೆಲೆಯಲ್ಲಿ ಗ್ರಾಮಸ್ಥರು ಪ್ರತಿಭಟನೆ ನಡೆಸಿದರು. ಈ ಸಂದರ್ಭದಲ್ಲಿ ಅನಿಲ್ ಹಾಗೂ ವಿಜಯಕುಮಾರ್ ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ್ದರು ಎನ್ನಲಾಗಿದೆ.  ಹಾಗಾಗಿ ಇವರಿಬ್ಬರ ವಿರುದ್ಧ ಬಿಳಿಕೆರೆ ಪೊಲೀಸ್ ಠಾಣೆಯಲ್ಲಿ ಎಫ್‍ಐಆರ್ ದಾಖಲಾಗಿದೆ.

Facebook Comments