ಕೊರೋನಾ ಸೋಂಕಿತರಿಗೆ ಬೆಡ್ ಮೀಸಲಿಡದ 4 ಖಾಸಗಿ ಆಸ್ಪತ್ರೆಗಳ ವಿರುದ್ಧ ಕ್ರಿಮಿನಲ್ ಕೇಸ್..!

ಈ ಸುದ್ದಿಯನ್ನು ಶೇರ್ ಮಾಡಿ

ಬೆಂಗಳೂರು, ಜು.31- ಕೊರೊನಾ ಸೋಂಕಿತರಿಗೆ ಶೇ.50ರಷ್ಟು ಹಾಸಿಗೆ ಮೀಸಲಿಡದ ನಗರದ ನಾಲ್ಕು ಪ್ರತಿಷ್ಠಿತ ಖಾಸಗಿ ಆಸ್ಪತ್ರೆಗಳ ವಿರುದ್ಧ ಡಿಸಾಸ್ಟರ್ ಮ್ಯಾನೇಜ್‍ಮೆಂಟ್ ಆ್ಯಕ್ಟ್ ಅಡಿಯಲ್ಲಿ ಬಿಬಿಎಂಪಿ ಕ್ರಿಮಿನಲ್ ಪ್ರಕರಣ ದಾಖಲಿಸಿದೆ.

ಸೆಂಟ್ ಮಾರ್ಥಾಸ್, ರಂಗದೊರೈ, ಶಿಫಾ ಹಾಗೂ ಪೋರ್ಟಿಸ್ ಆಸ್ಪತ್ರೆಗಳ ವಿರುದ್ಧ ಕ್ರಿಮಿನಲ್ ಕೇಸ್ ದಾಖಲಿಸಲಾಗಿದೆ ಎಂದು ಬಿಬಿಎಂಪಿ ಆಯುಕ್ತ ಮಂಜುನಾಥ್ ಪ್ರಸಾದ್ ಸುದ್ದಿಗೋಷ್ಠಿಯಲ್ಲಿಂದು ತಿಳಿಸಿದರು.

ದಕ್ಷಿಣ ವಲಯದ 19 ಆಸ್ಪತ್ರೆಗಳು ಕೊರೊನಾ ಸೋಂಕಿತರಿಗೆ ಬೆಡ್ ನೀಡದೆ ವಂಚಿಸಿವೆ ಎಂಬ ಮಾಹಿತಿ ಬಂದಿದೆ. ಇವುಗಳ ಪೈಕಿ ನಾಲ್ಕು ಪ್ರತಿಷ್ಠಿತ ಆಸ್ಪತ್ರೆಗಳ ವಿರುದ್ಧ ಕ್ರಮ ಕೈಗೊಳ್ಳಲಾಗಿದೆ ಎಂದು ಅವರು ವಿವರಿಸಿದರು.

Facebook Comments

Sri Raghav

Admin