ಶಾಸಕಿ ಸೌಮ್ಯರೆಡ್ಡಿ ವಿರುದ್ಧದ ಎಫ್‌ಐಆರ್‌ ರದ್ದಗೊಳಿಸುವಂತೆ ರೆಡ್ಡಿ ಜನ ಸಂಘದ ಆಗ್ರಹ

ಈ ಸುದ್ದಿಯನ್ನು ಶೇರ್ ಮಾಡಿ

ಬೆಂಗಳೂರು ಜನವರಿ 25: ಬಿಜೆಪಿ ಸರಕಾರವು ಕುತಂತ್ರ ರಾಜಕಾರಣದ ಮೂಲಕ ಮಹಿಳಾ ಶಾಸಕಿ ಸೌಮ್ಯರೆಡ್ಡಿ ಅವರ ಮೇಲೆ ಸುಳ್ಳು ದೂರನ್ನು ದಾಖಲಿಸಿ ಎಫ್‌ಐಆರ್‌ ದಾಖಲಿಸಿರುವುದನ್ನು ಕರ್ನಾಟಕ ರೆಡ್ಡಿ ಜನ ಸಂಘ ತೀವ್ರವಾಗಿ ಖಂಡಿಸಿದೆ. ರೈತರ ಹೋರಾಟದ ಸಂಧರ್ಭದಲ್ಲಿ ನಡೆದ ತಳ್ಳಾಟದಲ್ಲಿ ಮಹಿಳಾ ಶಾಸಕಿ ಸೌಮ್ಯರೆಡ್ಡಿ ಅವರು ಮತ್ತು ಇತರ ಶಾಸಕರು ಪ್ರತಿಭಟನೆಯಲ್ಲಿ ಮುನ್ನಡೆಯುತ್ತಿದ್ದಾಗ ಮಹಿಳಾ ಪೊಲೀಸ್‌ ಪೇದೆಗಳು ಹಾಗೂ ಇತರ ಪೊಲೀಸ್‌ ಸಿಬ್ಬಂದಿ ಅತ್ಯಂತ ಕೆಟ್ಟ ರೀತಿಯಲ್ಲಿ ವರ್ತಿಸಿದ್ದಾರೆ.

ಅವರನ್ನು ನೆಲಕ್ಕೆ ತಳ್ಳಿ ಎಳೆದಾಡಿ ಅವಮಾನಿಸಿರುವ ಚಿತ್ರಗಳು ಲಭ್ಯವಿದ್ದರೂ ಸಂಬಂಧಪಟ್ಟ ಅಧಿಕಾರಿಯ ಮೇಲೆ ಯಾವುದೇ ಕ್ರಮ ಜರುಗಿಸಿಲ್ಲ. ಅಲ್ಲದೆ, ಹೋರಾಟ ನಡೆದ 2 ದಿನಗಳ ನಂತರ ಎಫ್‌ಐಆರ್‌ ದಾಖಲಿಸಿ ಕುತಂತ್ರ ರಾಜಕಾರಣ ಮಾಡುವ ಮೂಲಕ ಮಹಿಳಾ ಶಾಸಕಿಗೆ ಕೆಟ್ಟ ಹೆಸರು ತರುವ ಉದ್ದೇಶದಿಂದ ಸುಳ್ಳ ಎಫ್‌ಐಆರ್‌ ದಾಖಲಿಸಲಾಗಿರುವುದು ಸರಿಯಲ್ಲ ಎಂದು ಕರ್ನಾಟಕ ರೆಡ್ಡಿ ಜನ ಸಂಘದ ಪ್ರಧಾನ ಕಾರ್ಯದರ್ಶಿ ಕೃಷ್ಣಾ ರೆಡ್ಡಿ ಕೆ.ಎನ್‌ ಅವರು ತಮ್ಮ ಪತ್ರದಲ್ಲಿ ತಿಳಿಸಿದ್ದಾರೆ.

ಈ ಸುಳ್ಳು ಎಫ್‌ಐಆರ್‌ ದಾಖಲಿಸಿರುವುದನ್ನು ಕೂಡಲೇ ರದ್ದುಗೊಳಿಸಬೇಕು ಹಾಗೂ ಈ ಬಗ್ಗೆ ಉನ್ನತ ಮಟ್ಟದ ತನಿಖೆ ನಡೆಸಿ ಘಟನೆಗೆ ಕಾರಣರಾದ ಪೊಲೀಸ್‌ ಸಿಬ್ಬಂದಿ ಮತ್ತು ಇತರರ ಮೇಲೆ ಕ್ರಮ ಜರುಗಿಸಬೇಕೆಂದು ಗೃಹ ಸಚಿವರು ಮತ್ತು ಮಾನ್ಯ ಮುಖ್ಯಮಂತ್ರಿಗಳಲ್ಲಿ ಕರ್ನಾಟಕ ರೆಡ್ಡಿ ಜನಸಂಘ ಆಗ್ರಹಿಸಿದೆ.

ಈ ಕೂಡಲೇ ಈ ಬಗ್ಗೆ ಸೂಕ್ತ ಆದೇಶ ಹೊರಡಿಸಿ ನ್ಯಾಯ ದೊರಕಿಸಿಕೊಡಬೇಕೆಂದು ಕೋರುತ್ತೇವೆ. ತಪ್ಪಿದಲ್ಲ ಕರ್ನಾಟಕ ರೆಡ್ಡಿ ಜನಸಂಘ ರಾಜ್ಯಾದ್ಯಂತ ತೀವ್ರತರವಾದ ಹೋರಾಟವನ್ನು ಹಮ್ಮಿಕೊಳ್ಳಲಿದೆ ಎಂದು ಕರ್ನಾಟಕ ರೆಡ್ಡಿ ಜನ ಸಂಘದ ಅಧ್ಯಕ್ಷರಾದ ಎಸ್‌. ಜಯರಾಮ್‌ ರೆಡ್ಡಿ, ಉಪಾಧ್ಯಕ್ಷರುಗಳಾದ ವಿ ವೆಂಕಟಶಿವಾರೆಡ್ಡಿ, ಎ.ಆರ್‌ ಶಿವರಾಮ್‌ ಹಾಗೂ ಎಲ್ಲಾ ಆಡಳಿತ ಮಂಡಳಿ ಸದಸ್ಯರು ಎಚ್ಚರಿಕೆಯನ್ನು ನೀಡಿದ್ದಾರೆ.

Facebook Comments

Sri Raghav

Admin